ಬೆಂಗಳೂರು : ಡಿಸೆಂಬರ್ 7 ರಿಂದ ನಡೆಯಲಿರುವ ವಿಧಾನಸಭೆ ಅಧಿವೇಶನದಲ್ಲಿ ಗೋಹತ್ಯೆ, ಮಾರಾಟ ಮತ್ತು ಗೋಮಾಂಸ ಸೇವನೆಯನ್ನು ನಿಷೇಧಿಸುವ ಕಾನೂನನ್ನು ಮಂಡಿಸಲಾಗುವುದು ಕರ್ನಾಟಕ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಮಂಗಳವಾರ ತಿಳಿಸಿದ್ದಾರೆ.
ಮಾಧ್ಯಮದೊಂದಿಗೆ ಈ ಬಗ್ಗೆ ಮಾತನಾಡಿದ ಚೌಹಾಣ್, ಇತರ ರಾಜ್ಯಗಳು ಜಾರಿಗೆ ತಂದಿರುವ ಇದೇ ರೀತಿಯ ಕಾನೂನುಗಳನ್ನು ಅಧ್ಯಯನ ಮಾಡುವುದರ ಜೊತೆಗೆ ಇಲಾಖೆಯು ವಿವಿಧ ಕ್ಷೇತ್ರಗಳ ತಜ್ಞರೊಂದಿಗೆ ಸಮಾಲೋಚಿಸುತ್ತಿದೆ ಎಂದು ಹೇಳಿದರು.
“ಇದೇ ರೀತಿಯ ಕಾನೂನುಗಳನ್ನು ಜಾರಿಗೆ ತಂದ ಇತರ ಎಲ್ಲ ರಾಜ್ಯಗಳಿಗಿಂತ ನಮ್ಮ ಕಾನೂನು ಕಠಿಣವಾಗಿರುತ್ತದೆ ಎಂದು ನಾನು ಭರವಸೆ ನೀಡಬಲ್ಲೆ” ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ವಿಚಾರವಾಗಿ ಸಂತೋಷ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.
ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಯಡಿಯೂರಪ್ಪ ಅವರು ಗೋಹತ್ಯೆಯನ್ನು ನಿಷೇಧಿಸಲು ಮತ್ತು ಬಲವಂತದ ಮತಾಂತರಗಳನ್ನು ತಡೆಯಲು ಬಲವಾದ ಕಾನೂನುಗಳನ್ನು ಜಾರಿಗೆ ತರಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದ್ದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…