Featured

ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಗೋಹತ್ಯೆ , ಮಾರಾಟ ಮತ್ತು ಗೋಮಾಂಸ ಸೇವನೆ ನಿಷೇಧ ಕಾನೂನು ಮಂಡಿಸಲಿರುವ ರಾಜ್ಯ ಸರ್ಕಾರ -Vishwanews24

ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಗೋಹತ್ಯೆ ಮಾರಾಟ ಮತ್ತು ಗೋಮಾಂಸ ಸೇವನೆ ನಿಷೇಧ ಕಾನೂನು ಮಂಡಿಸಲಿರುವ ರಾಜ್ಯ ಸರ್ಕಾರ

ಬೆಂಗಳೂರು : ಡಿಸೆಂಬರ್ 7 ರಿಂದ ನಡೆಯಲಿರುವ ವಿಧಾನಸಭೆ ಅಧಿವೇಶನದಲ್ಲಿ ಗೋಹತ್ಯೆ, ಮಾರಾಟ ಮತ್ತು ಗೋಮಾಂಸ ಸೇವನೆಯನ್ನು ನಿಷೇಧಿಸುವ ಕಾನೂನನ್ನು ಮಂಡಿಸಲಾಗುವುದು  ಕರ್ನಾಟಕ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್‌ ಮಂಗಳವಾರ ತಿಳಿಸಿದ್ದಾರೆ.

ಮಾಧ್ಯಮದೊಂದಿಗೆ ಈ ಬಗ್ಗೆ ಮಾತನಾಡಿದ ಚೌಹಾಣ್‌, ಇತರ ರಾಜ್ಯಗಳು ಜಾರಿಗೆ ತಂದಿರುವ ಇದೇ ರೀತಿಯ ಕಾನೂನುಗಳನ್ನು ಅಧ್ಯಯನ ಮಾಡುವುದರ ಜೊತೆಗೆ ಇಲಾಖೆಯು ವಿವಿಧ ಕ್ಷೇತ್ರಗಳ ತಜ್ಞರೊಂದಿಗೆ ಸಮಾಲೋಚಿಸುತ್ತಿದೆ ಎಂದು ಹೇಳಿದರು.

“ಇದೇ ರೀತಿಯ ಕಾನೂನುಗಳನ್ನು ಜಾರಿಗೆ ತಂದ ಇತರ ಎಲ್ಲ ರಾಜ್ಯಗಳಿಗಿಂತ ನಮ್ಮ ಕಾನೂನು ಕಠಿಣವಾಗಿರುತ್ತದೆ ಎಂದು ನಾನು ಭರವಸೆ ನೀಡಬಲ್ಲೆ” ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ವಿಚಾರವಾಗಿ ಸಂತೋಷ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಯಡಿಯೂರಪ್ಪ ಅವರು ಗೋಹತ್ಯೆಯನ್ನು ನಿಷೇಧಿಸಲು ಮತ್ತು ಬಲವಂತದ ಮತಾಂತರಗಳನ್ನು ತಡೆಯಲು ಬಲವಾದ ಕಾನೂನುಗಳನ್ನು ಜಾರಿಗೆ ತರಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದ್ದರು.

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

11 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

12 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

13 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

13 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

13 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

14 hours ago