ಬೆಂಗಳೂರು : ಮುಂದಿನ ಶೈಕ್ಷಣಿಕ ವರ್ಷದಿಂದ ಉನ್ನತ ಶಿಕ್ಷಣ ವಿಭಾಗದಲ್ಲಿ ಎಂಜಿನಿಯರಿಂಗ್ ಸೇರಿ ಎಲ್ಲ ವೃತ್ತಿಪರ ಕೋರ್ಸುಗಳನ್ನು ಕನ್ನಡದಲ್ಲಿ ಕಲಿಯಲು ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಕರ್ನಾಟಕ ವಿಶ್ವವಿದ್ಯಾಲಯದ ʼಹೊಸ ಶಿಕ್ಷಣ ನೀತಿ; ಭಾರತೀಯ ಭಾಷೆಗಳ ಅಧ್ಯಯನʼ ವಿಷಯದ ಕುರಿತ ವೆಬಿನಾರ್ ನಲ್ಲಿ ಭಾಗವಹಿಸಿದ ಅವರು ಮಾತನಾಡಿದರು. ಮುಂದಿನ 2022-23 ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಉನ್ನತ ಶಿಕ್ಷಣ ವಿಭಾಗದಲ್ಲಿ ಎಂಜಿನಿಯರಿಂಗ್ ಸೇರಿ ಎಲ್ಲ ವೃತ್ತಿಪರ ಕೋರ್ಸುಗಳನ್ನು ಕನ್ನಡದಲ್ಲಿ ಕಲಿಯಲು ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗುತ್ತಿದೆಈ ನಿಟ್ಟಿನಲ್ಲಿ ಎಂಜಿನಿಯರಿಂಗ್ ಕೋರ್ಸುಗಳ ಪಠ್ಯವನ್ನು ಕನ್ನಡಕ್ಕೆ ಭಾಷಾಂತರಿಸುವ ಕೆಲಸ ನಡೆದಿದೆ ಎಂದು ಹೇಳಿದರು.
ಶಿಕ್ಷಣ ನೀತಿಯ ಪ್ರಕಾರ ಮಕ್ಕಳು ಎರಡು ದೇಶಿಯ ಭಾಷೆಗಳನ್ನು ಹಾಗೂ ಒಂದು ಅಂತಾರಾಷ್ಟ್ರೀಯ ಭಾಷೆಯನ್ನು ಕಡ್ಡಾಯವಾಗಿ ಕಲಿಯಲೇಬೇಕು. ಅದರಲ್ಲಿ ಮಾತೃಭಾಷೆಗೆ ಮೊದಲ ಪ್ರಾಶಸ್ತ್ಯ ಇರುತ್ತದೆ. ಮೊದಲು ನಮ್ಮ ಭಾಷೆ, ನಂತರ ಅನ್ಯಭಾಷೆ. ಈ ಬಗ್ಗೆ ಯಾವುದೇ ಗೊಂದಲ ಬೇಡ, ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲೂ ಕನ್ನಡವನ್ನು ಬಳಸಬಹುದು. ಹೊಸ ತಂತ್ರಜ್ಞಾನವನ್ನು ತಮ್ಮ ಭಾಷೆಯ ಆಧಾರದ ಮೇಲೆಯೇ ರೂಪಿಸಬಹುದು. ತಂತ್ರಜ್ಞಾನ ಮತ್ತು ಆವಿಷ್ಕಾರ ಬೆಳೆದಂತೆಲ್ಲ ಅದಕ್ಕೆ ಸರಿಸಮವಾಗಿ ಕನ್ನಡವೂ ಬೆಳೆಯಬೇಕು. ಮಾತೃಭಾಷೆಯ ಅಸ್ತಿತ್ವ ಎಲ್ಲ ಕಡೆಯೂ ಇರಬೇಕು ಎಂಬುದು ಸರಕಾರದ ಉದ್ದೇಶವಾಗಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…