Featured

ಮುಂದಿನ 10 ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಈ ಬಜೆಟ್ ಪೂರಕವಾಗಲಿದೆ : ನಳಿನ್‍ಕುಮಾರ್ ಕಟೀಲ್ -Vishwanews24

ಮುಂದಿನ 10 ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಈ ಬಜೆಟ್ ಪೂರಕವಾಗಲಿದೆ : ನಳಿನ್‍ಕುಮಾರ್ ಕಟೀಲ್ -Vishwanews24

ಬೆಂಗಳೂರು : ಆರೋಗ್ಯ ಮತ್ತು ಮೂಲಸೌಕರ್ಯ ಕ್ಷೇತ್ರಕ್ಕೆ ಆದ್ಯತೆ ಕೊಡುವ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದು, ಇದು ದೇಶವನ್ನು ವಿಶ್ವವಂದ್ಯವನ್ನಾಗಿ ಪರಿವರ್ತಿಸುವಲ್ಲಿ ಪೂರಕವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ಶ್ರೀ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಮತ್ತೆರಡು ಮೆಟ್ರೊ ಮಾರ್ಗ (2ಎ ಮತ್ತು 2ಬಿ) ನಿರ್ಮಾಣಕ್ಕೆ 14,788 ಕೋಟಿ ರೂಪಾಯಿ ಮೀಸಲಿಟ್ಟಿರುವುದು ಮಹತ್ವದ ಕ್ರಮವಾಗಿದೆ. ನಗರದ ವಾಹನ ದಟ್ಟಣೆ ನಿವಾರಿಸುವಲ್ಲಿ ಮತ್ತು ಬೆಂಗಳೂರಿಗೆ ಇನ್ನಷ್ಟು ಕೈಗಾರಿಕೆಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಇದು ಪ್ರಮುಖ ಹೆಜ್ಜೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೋವಿಡ್ ಸಂಬಂಧ ಲಸಿಕೆ ಉತ್ಪಾದನೆಗೆ ಉತ್ತೇಜನ ನೀಡಲಾಗುತ್ತಿದೆ. ರೈತರ ಆದಾಯ ದ್ವಿಗುಣಗೊಳಿಸಲು ದೂರದೃಷ್ಟಿಯ ಯೋಜನೆ, ಯುವಕರಿಗೆ ಉದ್ಯೋಗಾವಕಾಶ ಹೆಚ್ಚಳಕ್ಕೆ ವಿಶೇಷ ಯೋಜನೆ, ಆರೋಗ್ಯ ಕ್ಷೇತ್ರ ಬಲಪಡಿಸಲು 64,180 ಕೋಟಿ, 500 ಅಮೃತ್ ನಗರಗಳಲ್ಲಿ 2.86 ಕೋಟಿ ಮನೆಗಳಿಗೆ ನಲ್ಲಿ ಸಂಪರ್ಕ ಒದಗಿಸುವುದು- ಇವೆಲ್ಲವೂ ದೇಶವನ್ನು ಅಭಿವೃದ್ಧಿ ಪಥದಲ್ಲಿ ಒಯ್ಯುವುದು ಖಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆತ್ಮನಿರ್ಭರ ಭಾರತ ಮತ್ತು ವೈಯಕ್ತಿಕ ಸ್ವಾವಲಂಬನೆ ನಿಟ್ಟಿನಲ್ಲಿ ಈ ಬಜೆಟ್ ಮಹತ್ವದ ಹೆಜ್ಜೆಯಾಗಿದೆ. ಮುಂದಿನ 10 ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಈ ಬಜೆಟ್ ಪೂರಕವಾಗಲಿದೆ. ಇದಕ್ಕಾಗಿ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರನ್ನು ಮತ್ತು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಅಭಿನಂದಿಸುವುದಾಗಿ ಅವರು ತಿಳಿಸಿದ್ದಾರೆ.

ಭಾರತದ ಇತಿಹಾಸದಲ್ಲಿಯೇ ಇಂತಹ ನಿರುತ್ಸಾಹಿ ಬಜೆಟ್ ಕಂಡಿರಲಿಲ್ಲ : ಡಿ ಕೆ ಶಿ -Vishwanews24

Vishwa News 24

Recent Posts

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

13 minutes ago

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ – vishwanews24

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…

28 minutes ago

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ – vishwanews24

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…

33 minutes ago

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ – vishwanews24

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…

40 minutes ago

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ – vishwanews24

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…

46 minutes ago

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

21 hours ago