Featured

ಮುಂದಿನ 10 ವರ್ಷದಲ್ಲಿ ಡಿ.ಕೆ.ಶಿವಕುಮಾರ್​ ಒಂದು ಬಾರಿ ಮುಖ್ಯಮಂತ್ರಿಯಾಗೋದು ನಿಶ್ಚಿತ : ಬ್ರಹ್ಮಾಂಡ ಗುರೂಜಿ ಭವಿಷ್ಯ -Vishwanews24

ಹಾಸನ: ಎರಡನೇ ಬಾರಿ ದೇಶದ ಅಧಿಕಾರ ಚುಕ್ಕಾಣಿ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿಗೆ ದೊಡ್ಡ ಕಂಟಕ ಎದುರಾಗಲಿದೆ.  ಇದೇ ನವೆಂಬರ್​ 4ರಿಂದ ಸಂಕ್ರಾಂತಿವರೆಗೆ ಮೋದಿಗೆ ಸಮಯ ಸರಿಯಿಲ್ಲ. ಅವರಿಗೆ ಕಷ್ಟ ಎದುರಾಗಲಿದೆ ಎಂದು ಬ್ರಹ್ಮಾಂಡ ಗುರೂಜಿ ಭವಿಷ್ಯ ನುಡಿದಿದ್ದಾರೆ..

ಬರುವ ನವೆಂಬರ್​ 4ರಿಂದ ಪ್ರಧಾನಿ ನರೇಂದ್ರ ಮೋದಿಯವರಿಗೆ ಗಂಡಾಂತರ ಇದೆ. ಅವರು ಈ ಅವಧಿಯಲ್ಲಿ ಅಪಮೃತ್ಯು ಗಂಡಾಂತರದಿಂದ ಪಾರಾದರೆ ಇನ್ನೂ ಎರಡೂ ಮುಕ್ಕಾಲು ವರ್ಷ ಪ್ರಧಾನಿಯಾಗಿ ಇರುತ್ತಾರೆ ಎಂದು ಬ್ರಹ್ಮಾಂಡ ಗುರೂಜಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು.

ರಾಜ್ಯ ರಾಜಕಾರಣ ಬಗ್ಗೆಯೂ ಭವಿಷ್ಯ ನುಡಿದ ಅವರು, ರಾಜ್ಯದಲ್ಲಿ ಈ ಹಿಂದೆ ಇದ್ದವರು ಯಾರೂ ಮುಖ್ಯಮಂತ್ರಿ ಆಗೋದಿಲ್ಲ. ಹೊಸ ಸರ್ಕಾರ ಬಂದರೆ ಹೊಸಬರೇ ಮುಖ್ಯಮಂತ್ರಿಯಾಗುತ್ತಾರೆ. ಯಡಿಯೂರಪ್ಪನವರಿಗೆ ಪೂರ್ಣ ಅವಧಿಗೆ ಸಿಎಂ ಆಗಿರುವ ಅವಕಾಶ ಇಲ್ಲವೇ ಇಲ್ಲ. ಸಮ್ಮಿಶ್ರ ಸರ್ಕಾರ ಇನ್ನು ಅಧಿಕಾರಕ್ಕೆ ಬರುವುದಿಲ್ಲ ಎಂದರು.

ನವೆಂಬರ್​ 4ರ ಬಳಿಕ ಎರಡು ದೊಡ್ಡ ಗ್ರಹಗಳು ಒಂದೆಡೆ ಸೇರಲಿವೆ. ರಾಜ್ಯದಲ್ಲಿ ಯಡಿಯೂರಪ್ಪ ಅವರಿಗೆ ಮುಂದಿನ ದಿನಗಳಲ್ಲಿ ಕಷ್ಟ ಎದುರಾಗಲಿದೆ. ಯಡಿಯೂರಪ್ಪ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಅವಧಿಯನ್ನು ಪೂರೈಸುವುದಿಲ್ಲ. ಅವರ ಬಳಿಕ ಹೊಸಬರು ರಾಜ್ಯದ ಸಿಎಂ ಆಗಿ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದಾರೆ ಎಂದರು

ಡಿ.ಕೆ.ಶಿವಕುಮಾರ್​  ಅವರು, ಕೋಟಿ ಕೋಟಿ ಹಣ ಮಾಡಿದವರು ಕೃಷ್ಣ ಜನ್ಮಸ್ಥಳಕ್ಕೆ ಹೋಗಲೇಬೇಕು. ಮುಂದಿನ 10 ವರ್ಷದಲ್ಲಿ ಡಿ.ಕೆ.ಶಿವಕುಮಾರ್​ ಒಂದು ಬಾರಿ ಮುಖ್ಯಮಂತ್ರಿಯಾಗೋದು ನಿಶ್ಚಿತ. 10 ವರ್ಷಗಳಲ್ಲಿ ಐದು ವರ್ಷ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದರು.

ಹಾಗೇ ಪ್ರಾಕೃತಿಕ ವಿಕೋಪಗಳು ಹೆಚ್ಚುತ್ತವೆ. ಆಹಾರದ ಬೆಲೆ ಏರುತ್ತದೆ, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಬ್ರಹ್ಮಾಂಡ ಗುರೂಜಿ ಹೇಳಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago