ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯ ಮುನ್ಸೂಚನೆ : ಉಡುಪಿ , ದ.ಕ.ದಲ್ಲಿ ರೆಡ್ ಅಲರ್ಟ್  : ಹವಾಮಾನ ಇಲಾಖೆ – Vishwanews24

Featured, ಉಡುಪಿ, ದಕ್ಷಿಣ ಕನ್ನಡ

ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯ ಮುನ್ಸೂಚನೆ : ಉಡುಪಿ , ದ.ಕ.ದಲ್ಲಿ ರೆಡ್ ಅಲರ್ಟ್  : ಹವಾಮಾನ ಇಲಾಖೆ

ಮಂಗಳೂರು: ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಅಧಿಕ ಪ್ರಮಾಣದಲ್ಲಿ ಮಳೆ ಬೀಳುವ ಸಂಭವವಿದ್ದು ರಾಜ್ಯದ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ ಮುಂದುವರಿಯಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಮೂರು ಜಿಲ್ಲೆಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ಮತ್ತು ಶನಿವಾರದಂದು ಆರೆಂಜ್ ಅಲರ್ಟ್ ಘೋಷಿಸಿದೆ.ಈ ವೇಳೆ 115.6 ಮಿಮೀಯಿಂದ 204.4 ಮಿಮಿವರೆಗೆ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಕರಾವಳಿ ಜಿಲ್ಲೆಗಳಲ್ಲಿ ತೀವ್ರವಾಗಿ ಮಳೆಯಾಗುತ್ತಿದ್ದು, ರಸ್ತೆ ಸಂಪರ್ಕ ಕಡಿತ, ಮನೆಗಳಿಗೆ ಹಾನಿಯಾಗಿ ಜನಜೀವನ ಅಸ್ತವ್ಯಸ್ತಗೊಂಡು, ಹಲವೆಡೆ ಭಾರೀ ಹಾನಿ ಸಂಭವಿಸಿದೆ.

ಉಡುಪಿ : ಕಮಲಶಿಲೆ ದೇವಸ್ಥಾನದ ಒಳಗೆ ಹರಿದುಬಂದ ಕುಬ್ಜಾ ನದಿ ನೀರು .. ಭಕ್ತರಿಂದ ದೇವಿಗೆ ವಿಶೇಷ ಆರತಿ ಸೇವೆ – Vishwanews24

Leave a Reply