Featured

ಮುಂದಿನ 4 ದಿನ ಕರಾವಳಿಯಲ್ಲಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ – ಯೆಲ್ಲೋ’ ಅಲರ್ಟ್ ಘೋಷಣೆ – vishwanews24

ಮುಂದಿನ 4 ದಿನ ಕರಾವಳಿಯಲ್ಲಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ – ಯೆಲ್ಲೋ’ ಅಲರ್ಟ್ ಘೋಷಣೆ

ಬೆಂಗಳೂರು, : ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಿಗೆ ‘ಯೆಲ್ಲೋ’ ಅಲರ್ಟ್ ಘೋಷಿಸಲಾಗಿದೆ.

ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ವಾಯುಭಾರ ಕುಸಿತದಿಂದಾಗಿ ಪೂರ್ವಕ್ಕೆ ಮೋಡ ಚಲನೆಯಾಗುತ್ತಿದೆ. ಇದರ ಪರಿಣಾಮ ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ವಾರಾಂತ್ಯದವರೆಗೂ ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂದು ಐಎಂಡಿ ಹಿರಿಯ ವಿಜ್ಞಾನಿ ಪ್ರಸಾದ್ ಹೇಳಿದ್ದಾರೆ.

ಬೆಂಗಳೂರಿನ ಕೆಲವು ಭಾಗಗಳಲ್ಲಿ ಸಣ್ಣ ತುಂತುರು ಮಳೆಯಾಗಿದ್ದು, ಇದು ಮುಂದಿನ ಒಂದೆರಡು ದಿನ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ. ಮೋಡ ಕವಿದ ವಾತಾವರಣವಿರುವುದರಿಂದ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 1-2 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಲಿದ್ದು, ಕನಿಷ್ಠ ತಾಪಮಾನ 1-2 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ. ಮೋಡ ಕವಿದ ವಾತಾವರಣದೊಂದಿಗೆ ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಗಾಳಿ ವೇಗ ತೀವ್ರವಾಗಿರಲಿದೆ ಎಂದು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

11 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

11 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

12 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

12 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

12 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

12 hours ago