ಮುಂದಿನ 4 ದಿನ ಮಳೆ ಸಾಧ್ಯತೆ : ಇಂದು ರಾಜ್ಯಾದ್ಯಂತ ಯೆಲ್ಲೋ ಅಲರ್ಟ್ – vishwanews24

Featured, ಉಡುಪಿ, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ಮುಂದಿನ 4 ದಿನ ಮಳೆ ಸಾಧ್ಯತೆ : ಇಂದು ರಾಜ್ಯಾದ್ಯಂತ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ  ಸಾಧ್ಯತೆಯಿದ್ದು, ಇಂದು ರಾಜ್ಯದಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜೂ.11ರಂದು ಮಲೆನಾಡು, ಕರಾವಳಿ ಕರ್ನಾಟಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಉಳಿದೆಲ್ಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂ.12ರಂದು ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಜೂ. 13ರಂದು 10 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು, ಕರಾವಳಿ ಸೇರಿ ಇತರೆ ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Leave a Reply