ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಮಳೆರಾಯನ ಆರ್ಭಟ ಮುಂದುವರಿಯಲಿದೆ. ಮುಂದಿನ ಏಳು ದಿನಗಳ ಕಾಲ ರಾಜ್ಯಕ್ಕೆ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದ ಹಲವು ಜಿಲ್ಲೆಗಳಿಗೆ ರೆಡ್, ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರ್ನಾಟಕ ಒಳನಾಡಿನ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಒಳನಾಡು ಜಿಲ್ಲೆಗಳಲ್ಲಿ 45-55 ಕಿಮೀ ವೇಗದಲ್ಲಿ ನಿರಂತರವಾಗಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆ ಕರಾವಳಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶನಿವಾರ ಕರಾವಳಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿಯೂ ಭಾರೀ ಗಾಳಿ- ಮಳೆಯಾಗುವ ಸಾಧ್ಯತೆಯಿದ್ದು, ಆರೆಂಟ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಂಗಳೂರಲ್ಲಿ ಮುಂದಿನ 2 ದಿನಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ
ಭದ್ರತಾ ಪಡೆಗಳ ಎನ್‌ಕೌಂಟ್‌ಗೆ ಲಷ್ಕರ್ ಉಗ್ರ ಲತೀಫ್ ಭಟ್ ಬಲಿ ಶ್ರೀನಗರ: ಕುಲ್ಗಾಮ್‌ನ ಸಿಆರ್‌ಪಿಎಫ್ ಚೆಕ್ ಪೋಸ್ಟ್ ಮೇಲೆ ದಾಳಿ…
ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಎರಡನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಮುಷ್ಕರ ಬೆಂಗಳೂರು: ಮಾಸಿಕ…
ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ ಕಾರಣ : ಸಿದ್ದರಾಮಯ್ಯ ಸ್ಪಷ್ಟನೆ ಸೋನಿಯಾ ಗಾಂಧಿ ಆತ್ಮಚರಿತ್ರೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ 5ನೇ…
ಬ್ರಹ್ಮಾವರ: ವಿದ್ಯುತ್ ತಂತಿ ಸ್ಪರ್ಶಿಸಿ ಒಣ ಹುಲ್ಲು ಸಾಗಾಟದ ಲಾರಿಗೆ ಬೆಂಕಿ ; ಚಾಲಕ ಅಪಾಯದಿಂದ ಪಾರು ಬ್ರಹ್ಮಾವರ,:ಒಣ ಹುಲ್ಲು…
ಮಂಗಳೂರು: ಮೊಟ್ಟೆ ಸಾಗಣೆ ವಾಹನದಲ್ಲಿ ಅಕ್ರಮ ಜಾನುವಾರು ಸಾಗಟ ; ಇಬ್ಬರು ಬಂಧನ ಮಂಗಳೂರು: ನಗರದ ಪಂಪ್‌ವೆಲ್ ಬಳಿ ಮೊಟ್ಟೆ…
ಚಿಕಿತ್ಸೆಗೂ ಮುನ್ನವೇ ವೆಚ್ಚದ ಮಾಹಿತಿ ಕಡ್ಡಾಯ :ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಎಚ್ಚರಿಕೆ ಬೆಂಗಳೂರು: ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ…