Featured

ಮುಂದುವರಿದ ಗಾಳಿ ಮಳೆ, ಉದ್ಯಾವರದಲ್ಲಿ ಶಾಲೆಗಳಿಗೆ ರಜೆ ಘೋಷಣೆ..

ಉಡುಪಿ,: ಉದ್ಯಾವರ ಪರಿಸರದಲ್ಲಿ ನಿನ್ನೆ ರಾತ್ರಿ ಭಾರೀ ಗಾಳಿಯೊಂದಿಗೆ ಸುರಿದ ಮಳೆಗೆ ಹಲವೆಡೆ ಬೃಹತ್ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಇದರಿಂದ ಹಲವೆಡೆ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿರುವ ಹಿನ್ನೆಲೆಯಲ್ಲಿ ಉದ್ಯಾವರ ಪರಿಸರದ ಶಾಲೆಗಳಿಗೆ ಇಂದು ರಜೆ ಸಾರಲಾಗಿದೆ.

ರಾತ್ರಿ ಬೀಸಿದ ಭಾರೀ ಗಾಳಿಗೆ ಉದ್ಯಾವರ ಪೇಟೆಯ ಕಾಮತ್ ಹೊಟೇಲ್ ಬಳಿಯಿದ್ದ ಬೃಹತ್ ಮರವೊಂದು ರಸ್ತೆಗಡ್ಡವಾಗಿ ಉರುಳಿಬಿದ್ದಿದೆ. ಶಂಭುಕಲ್ಲು ದೇವಳದ ಬಳಿ ಹಾಗೂ ಪಿತ್ರೋಡಿಯಲ್ಲಿ ಮರಗಳು ಉರುಳಿ ರಸ್ತೆಗೆ ಬಿದ್ದಿವೆ. ಕೆಲವೆಡೆ ವಿದ್ಯುತ್ ಕಂಬಗಳು ರಸ್ತೆಗುರುಳಿವೆ. ಇದರಿಂದ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಬೆಳಗ್ಗೆಯಿಂದ ಮರಗಳು ತೆರವು ಕಾರ್ಯ ನಡೆದಿದೆ. ಈ ನಡುವೆ ಮಳೆ ಅವಾಂತರದ

ಹಿನ್ನೆಲೆಯಲ್ಲಿ ಉದ್ಯಾವರ ಪರಿಸರದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
 ಉದ್ಯಾವರ ಪರಿಸರದಲ್ಲಿ ನಿನ್ನೆಯಿಂದ ಸುರಿದ ಗಾಳಿಮಳೆಗೆ ಸುಮಾರು 70ರಷ್ಟು ವಿದ್ಯುತ್ ಕಂಬಗಳು ಧರೆಗುರುಳಿವೆ. ಇದರಿಂದ ಪರಿಸರದ ವಿದ್ಯುತ್ ಸಂಪರ್ಕದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಅಂಗಡಿ, ಮನೆಗಳ ಮೇಲೆ ಉರುಳಿಬಿದ್ದ ಪರಿಣಾಮ ವ್ಯಾಪಕ ಹಾನಿ ಸಂಭವಿಸಿದೆ. ಉದ್ಯಾವರದ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಹಾಕಲಾಗಿದ್ದ ಸುಮಾರು 15ಕ್ಕೂ ಅಧಿಕ ಜಾಹೀರಾತು ಹೋರ್ಡಿಂಗ್‌ಗಳು ಗಾಳಿಯ ಅಬ್ಬರಕ್ಕೆ ಸಿಲುಕಿ ಹಾನಿಗೊಂಡಿವೆ. ಕೆಲವು ಹೋರ್ಡಿಂಗ್‌ಗಳು ಮನೆಯ ಮೇಲೆ ಬಿದ್ದಿರುವುದು ವರದಿಯಾಗಿದೆ.

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago