ಉಡುಪಿ,: ಉದ್ಯಾವರ ಪರಿಸರದಲ್ಲಿ ನಿನ್ನೆ ರಾತ್ರಿ ಭಾರೀ ಗಾಳಿಯೊಂದಿಗೆ ಸುರಿದ ಮಳೆಗೆ ಹಲವೆಡೆ ಬೃಹತ್ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಇದರಿಂದ ಹಲವೆಡೆ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿರುವ ಹಿನ್ನೆಲೆಯಲ್ಲಿ ಉದ್ಯಾವರ ಪರಿಸರದ ಶಾಲೆಗಳಿಗೆ ಇಂದು ರಜೆ ಸಾರಲಾಗಿದೆ.
ರಾತ್ರಿ ಬೀಸಿದ ಭಾರೀ ಗಾಳಿಗೆ ಉದ್ಯಾವರ ಪೇಟೆಯ ಕಾಮತ್ ಹೊಟೇಲ್ ಬಳಿಯಿದ್ದ ಬೃಹತ್ ಮರವೊಂದು ರಸ್ತೆಗಡ್ಡವಾಗಿ ಉರುಳಿಬಿದ್ದಿದೆ. ಶಂಭುಕಲ್ಲು ದೇವಳದ ಬಳಿ ಹಾಗೂ ಪಿತ್ರೋಡಿಯಲ್ಲಿ ಮರಗಳು ಉರುಳಿ ರಸ್ತೆಗೆ ಬಿದ್ದಿವೆ. ಕೆಲವೆಡೆ ವಿದ್ಯುತ್ ಕಂಬಗಳು ರಸ್ತೆಗುರುಳಿವೆ. ಇದರಿಂದ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಬೆಳಗ್ಗೆಯಿಂದ ಮರಗಳು ತೆರವು ಕಾರ್ಯ ನಡೆದಿದೆ. ಈ ನಡುವೆ ಮಳೆ ಅವಾಂತರದ
ಹಿನ್ನೆಲೆಯಲ್ಲಿ ಉದ್ಯಾವರ ಪರಿಸರದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಉದ್ಯಾವರ ಪರಿಸರದಲ್ಲಿ ನಿನ್ನೆಯಿಂದ ಸುರಿದ ಗಾಳಿಮಳೆಗೆ ಸುಮಾರು 70ರಷ್ಟು ವಿದ್ಯುತ್ ಕಂಬಗಳು ಧರೆಗುರುಳಿವೆ. ಇದರಿಂದ ಪರಿಸರದ ವಿದ್ಯುತ್ ಸಂಪರ್ಕದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಅಂಗಡಿ, ಮನೆಗಳ ಮೇಲೆ ಉರುಳಿಬಿದ್ದ ಪರಿಣಾಮ ವ್ಯಾಪಕ ಹಾನಿ ಸಂಭವಿಸಿದೆ. ಉದ್ಯಾವರದ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಹಾಕಲಾಗಿದ್ದ ಸುಮಾರು 15ಕ್ಕೂ ಅಧಿಕ ಜಾಹೀರಾತು ಹೋರ್ಡಿಂಗ್‌ಗಳು ಗಾಳಿಯ ಅಬ್ಬರಕ್ಕೆ ಸಿಲುಕಿ ಹಾನಿಗೊಂಡಿವೆ. ಕೆಲವು ಹೋರ್ಡಿಂಗ್‌ಗಳು ಮನೆಯ ಮೇಲೆ ಬಿದ್ದಿರುವುದು ವರದಿಯಾಗಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…