ಲಾಹೋರ್: ಮುಂಬಯಿ ದಾಳಿ ಸಂಚುಕೋರ ಹಾಗೂ ನಿಷೇಧಿತ ಜಾಮತ್ ಉದ್ ದಾವಾ ಉಗ್ರ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್ನನ್ನು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಭಯೋತ್ಪಾದನೆ ನಿಗ್ರಹ ಇಲಾಖೆ ಬುಧವಾರ ಬಂಧಿಸಿ ಜೈಲಿಗೆ ಕಳುಹಿಸಿದೆ.
2008ರಲ್ಲಿ ಮುಂಬಯಿ ಮೇಲೆ ಉಗ್ರದಾಳಿ ನಡೆಸಿದ ಲಷ್ಕರೆ ತಯ್ಬಾ ಭಯೋತ್ಪಾದಕ ಸಂಘಟನೆಯ ರಾಜಕೀಯ ಮುಖವಾದ ಜಮಾತ್ ಉದ್ ದಾವಾದ ಮುಖ್ಯಸ್ಥ ಈ ಸಯೀದ್. ಮುಂಬಯಿ ದಾಳಿಯಲ್ಲಿ 166 ಮಂದಿ ಮೃತಪಟ್ಟಿದ್ದರು.
ಅಮೆರಿಕದ ವಿದೇಶಾಂಗ ಸಚಿವಾಲಯ ಸಯೀದ್ನನ್ನು ಜಾಗತಿಕ ಭಯೋತ್ಪಾದಕನೆಂದು 2012ರಲ್ಲೇ ಘೋಷಿಸಿದೆ. ಅಲ್ಲದೆ 100 ಕೋಟಿ ಡಾಲರ್ ಬಹುಮಾನವನ್ನೂ ಈತನ ತಲೆಗೆ ನಿಗದಿಪಡಿಸಿದೆ.
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಹಫೀಜ್ ಸಯೀದ್ ಮೇಲೆ ಈತನಕ ಒಟ್ಟು 23 ಪ್ರಕರಣ ದಾಖಲಾಗಿತ್ತು.
ಇದೀಗ ಮಹತ್ವದ ಬೆಳವಣಿಗೆಯಲ್ಲಿ ಭಯೋತ್ಪಾದನಾ ನಿಗ್ರಹ ಇಲಾಖೆ ಪಾಕಿಸ್ತಾನದ ಗರಿಷ್ಠ ಭದ್ರತೆಯನ್ನು ಹೊಂದಿರುವ ಕೋಟ್ ಲಖ್ಪತ್ ಜೈಲಿಗೆ ಸಯೀದ್ನನ್ನು ಕಳುಹಿಸಲಾಗಿದ್ದು, ನ್ಯಾಯಾಂಗ ರಿಮಾಂಡ್ ವಿಧಿಸಲಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…