Featured

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ

ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಗುರುವಾರ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕಳೆದ 24 ಗಂಟೆಯಲ್ಲಿ 150 ಮಿಲಿ ಮೀಟರ್‌ ಮಳೆಯಾಗಿದೆ ಎಂದು ವರದಿ ತಿಳಿಸಿದೆ. ಇದರ ನಡುವೆ ಪಶ್ಚಿಮ ಉಪನಗರದ ಚಾಂದಿವಲಿಯಲ್ಲಿ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದು 55 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟರೆ ಪಾಲ್ಘರ್‌ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ ನಡುವೆ ಮೀನುಗಾರಿಕೆಗೆ ತೆರಳಿದ್ದ ಇಬ್ಬರ ಪೈಕಿ ಒಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಭಾರಿ ಮಳೆಯಿಂದಾಗಿ ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಮುಂಬಯಿಯ ಸ್ಥಳೀಯ ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ. ಕಣ್ಣೆದುರೇ ಕಣ್ಮರೆ ಚಾಂದಿವಲಿ ವ್ಯಾಪ್ತಿಯ ಖೈರಾನಿ ರಸ್ತೆಯಲ್ಲಿನ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಅಸ್ಲಾಂ ಈಸಾಫ್‌ ಶೇಖ್‌ (55) ಎಂದು ಗುರುತಿಸಲಾಗಿದೆ.

ಮೊಬೈಲ್‌ನಲ್ಲಿ ಮಾತನಾಡುತ್ತ ಹೋಗುತ್ತಿದ್ದ ಅಸ್ಲಾಂ, ಅಲ್ಲಿ ನಿಲ್ಲಿಸಲಾಗಿದ್ದ ಟೆಂಪೋ ಒಂದರ ಪಕ್ಕದಿಂದ ಸಾಗುತ್ತಿದ್ದಾಗ ರಸ್ತೆಯಲ್ಲಿದ್ದ ತೆರೆದ ಮ್ಯಾನ್‌ಹೋಲ್‌ಗೆ ಹಠಾತ್‌ ಆಗಿ ಬಿದ್ದು ಕೊಚ್ಚಿ ಹೋಗಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ಗುತ್ತಿಗೆ ಕಾರ್ಮಿಕರು ದುರಸ್ತಿ ಕಾರ್ಯಕ್ಕಾಗಿ ಮ್ಯಾನ್‌ಹೋಲ್‌ ಮುಚ್ಚಳವನ್ನು ತಾತ್ಕಾಲಿಕವಾಗಿ ತೆರೆದಿದ್ದರು ಎನ್ನಲಾಗಿದೆ.

ಮಳೆಯಿಂದಾಗಿ ರೈಲ್ವೇ ಹಳಿಗಳ ಮೇಲೆ ನೀರು ನಿಂತಿದ್ದರಿಂದ ಮುಂಜಾನೆಯ ದಟ್ಟಣೆ ಅವಧಿಯಲ್ಲಿ ಸ್ಥಳೀಯ ರೈಲುಗಳ ಸಂಚಾರಕ್ಕೆ ಅಡ್ಡಿಯಾಯಿತು. ಹೆಚ್ಚಿನ ರೈಲುಗಳು 10ರಿಂದ 15 ನಿಮಿಷ ತಡವಾಗಿ ಧಾವಿಸುತ್ತಿದ್ದ ಕಾರಣ ನಿಲ್ದಾಣಗಳಲ್ಲಿ ಭಾರಿ ಜನದಟ್ಟಣೆ ಕಂಡುಬಂದಿತು.

ಮಧ್ಯಾಹ್ನದ ವೇಳೆಗೆ ಮಳೆ ಕೊಂಚ ಬಿಡುವು ನೀಡಿದೆಯಾದರೂ, ಭಾರತೀಯ ಹವಾಮಾನ ಇಲಾಖೆ ಮುಂಬಯಿ ಮತ್ತು ಅದರ ಉಪನಗರಗಳಲ್ಲಿ ಗುರುವಾರ ರಾತ್ರಿ ಹಾಗೂ ಶುಕ್ರವಾರ ಮುಂಜಾನೆ ಧಾರಾಕಾರ ಮಳೆ ಸುರಿದಿದೆ ಎಂದು ವರದಿ ತಿಳಿಸಿದೆ

Vishwa News 24

Recent Posts

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

35 minutes ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

1 hour ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

2 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

2 hours ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

2 hours ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

2 hours ago