ಮುಂಬಯಿ : ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಗೆಳತಿಯ ದೇಹವನ್ನು ತುಂಡು ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಪ್ರಿಯಕರ – Vishwanews24
ಮುಂಬಯಿ : ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಗೆಳತಿಯ ದೇಹವನ್ನು ತುಂಡು ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಪ್ರಿಯಕರ
ಮುಂಬೈ : ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಅದನ್ನು ಕುಕ್ಕರ್ ನಲ್ಲಿ ಬೇಯಿಸಿರುವ ಭೀಭತ್ಸ ಘಟನೆ ಮುಂಬಯಿಯಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿಯನ್ನು ಮನೋಜ್ ಸಹಾನಿ (56) ಎಂದು ಗುರುತಿಸಲಾಗಿದ್ದು, ಈತ ತನ್ನ ಲಿವ್ ಇನ್ ಗೆಳತಿ ಸರಸ್ವತಿ ವೈದ್ಯ ಎಂಬ ಮಹಿಳೆಯನ್ನು ಕೊಲೆ ಮಾಡಿದ್ದಾನೆ.
ಆರೋಪಿ ಕಳೆದ ಮೂರು ವರ್ಷಗಳಿಂದ ಗೀತಾ ನಗರ 7ನೇ ಹಂತದ ಗೀತಾ ಆಕಾಶ್ ದೀಪ್ ಕಟ್ಟಡದಲ್ಲಿ 704 ಫ್ಲಾಟ್‌ನಲ್ಲಿ ಸರಸ್ವತಿ ವೈದ್ಯ (36) ಎಂಬುವವರೊಂದಿಗೆ ವಾಸವಾಗಿದ್ದರು.
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಲಕ್ಷಾಮ ; ಸಂಪೂರ್ಣ ಬತ್ತಿ ಹೋದ ನಂದಿನಿ ನದಿ – Vishwanews24
ಮನೋಜ್ ಸಹಾನಿ ಮತ್ತು ಸರಸ್ವತಿ ವೈದ್ಯ ಅವರು ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದರು. ಕೆಲವು ವಿಷಯಕ್ಕೆ ಇಬ್ಬರ ನಡುವೆ ಜಗಳವಾಗಿದೆ. ಇದೇ ವಿಚಾರಕ್ಕೆ ಈ ಕೃತ್ಯ ನಡೆದಿರಬಹುದು. ಆಕೆಯ ದೇಹವನ್ನು ಮರ ಕಟ್ ಮಾಡುವ ಮಿಷನ್ ನಿಂದ ತುಂಡು ಮಾಡಲಾಗಿದೆ. ಶಂಕಿತ ಆರೋಪಿ ಸಾಕ್ಷ್ಯವನ್ನು ಮರೆಮಾಡಲು ಪ್ರಯತ್ನಿಸುವ ಸಲುವಾಗಿ ಈ ರೀತಿ ದೇಹದ ಭಾಗವನ್ನು ಕುಕ್ಕರ್ ನಲ್ಲಿ ಬೇಯಿಸಿರಬಹುದು” ಎಂದು ಪೊಲೀಸ್ ಉಪ ಆಯುಕ್ತ ಜಯಂತ್ ಬಜ್ಬಲೆ ಅವರು ಹೇಳಿದ್ದಾರೆ. ಬುಧವಾರ ಸಂಜೆ ಫ್ಲಾಟ್ ನ ಇತರೆ ಸದಸ್ಯರು ಮನೋಜ್ ಅವರ ನಿವಾಸದಿಂದ ಕೆಟ್ಟ ವಾಸನೆ ಬರುತ್ತಿರುವುದರಿಂದ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸದ್ಯ ಪೊಲೀಸರು ಆರೋಪಿ ಮನೋಜ್ ಸಹಾನಿಯನ್ನು ಬಂಧಿಸಿದ್ದಾರೆ.
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಲಕ್ಷಾಮ ; ಸಂಪೂರ್ಣ ಬತ್ತಿ ಹೋದ ನಂದಿನಿ ನದಿ – Vishwanews24
