Featured

ಮುಂಬಯಿ : ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಗೆಳತಿಯ ದೇಹವನ್ನು ತುಂಡು ಮಾಡಿ  ಕುಕ್ಕರ್ ನಲ್ಲಿ ಬೇಯಿಸಿದ ಪ್ರಿಯಕರ – Vishwanews24

ಮುಂಬಯಿ : ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಗೆಳತಿಯ ದೇಹವನ್ನು ತುಂಡು ಮಾಡಿ  ಕುಕ್ಕರ್ ನಲ್ಲಿ ಬೇಯಿಸಿದ ಪ್ರಿಯಕರ

ಮುಂಬೈ : ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಅದನ್ನು ಕುಕ್ಕರ್ ನಲ್ಲಿ ಬೇಯಿಸಿರುವ ಭೀಭತ್ಸ ಘಟನೆ ಮುಂಬಯಿಯಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿಯನ್ನು ಮನೋಜ್ ಸಹಾನಿ (56) ಎಂದು ಗುರುತಿಸಲಾಗಿದ್ದು, ಈತ ತನ್ನ ಲಿವ್ ಇನ್ ಗೆಳತಿ ಸರಸ್ವತಿ ವೈದ್ಯ ಎಂಬ ಮಹಿಳೆಯನ್ನು ಕೊಲೆ ಮಾಡಿದ್ದಾನೆ.

ಆರೋಪಿ ಕಳೆದ ಮೂರು ವರ್ಷಗಳಿಂದ ಗೀತಾ ನಗರ 7ನೇ ಹಂತದ ಗೀತಾ ಆಕಾಶ್ ದೀಪ್ ಕಟ್ಟಡದಲ್ಲಿ 704 ಫ್ಲಾಟ್‌ನಲ್ಲಿ ಸರಸ್ವತಿ ವೈದ್ಯ (36) ಎಂಬುವವರೊಂದಿಗೆ ವಾಸವಾಗಿದ್ದರು.

ಮನೋಜ್ ಸಹಾನಿ ಮತ್ತು ಸರಸ್ವತಿ ವೈದ್ಯ ಅವರು ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದರು. ಕೆಲವು ವಿಷಯಕ್ಕೆ ಇಬ್ಬರ ನಡುವೆ ಜಗಳವಾಗಿದೆ. ಇದೇ ವಿಚಾರಕ್ಕೆ ಈ ಕೃತ್ಯ ನಡೆದಿರಬಹುದು. ಆಕೆಯ ದೇಹವನ್ನು ಮರ ಕಟ್‌ ಮಾಡುವ ಮಿಷನ್‌ ನಿಂದ ತುಂಡು ಮಾಡಲಾಗಿದೆ. ಶಂಕಿತ ಆರೋಪಿ ಸಾಕ್ಷ್ಯವನ್ನು ಮರೆಮಾಡಲು ಪ್ರಯತ್ನಿಸುವ ಸಲುವಾಗಿ ಈ ರೀತಿ ದೇಹದ ಭಾಗವನ್ನು ಕುಕ್ಕರ್‌ ನಲ್ಲಿ ಬೇಯಿಸಿರಬಹುದು” ಎಂದು ಪೊಲೀಸ್ ಉಪ ಆಯುಕ್ತ ಜಯಂತ್ ಬಜ್ಬಲೆ ಅವರು ಹೇಳಿದ್ದಾರೆ. ಬುಧವಾರ ಸಂಜೆ ಫ್ಲಾಟ್‌ ನ ಇತರೆ ಸದಸ್ಯರು ಮನೋಜ್‌ ಅವರ ನಿವಾಸದಿಂದ ಕೆಟ್ಟ ವಾಸನೆ ಬರುತ್ತಿರುವುದರಿಂದ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸದ್ಯ ಪೊಲೀಸರು ಆರೋಪಿ ಮನೋಜ್ ಸಹಾನಿಯನ್ನು ಬಂಧಿಸಿದ್ದಾರೆ.

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

17 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

17 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

17 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

18 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

18 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

18 hours ago