Featured

ಮುಂಬರುವ ಗ್ರಾಮಪಂಚಾಯತ್ ಚುನಾವಣೆಯಲ್ಲಿ ರಾಜ್ಯದಲ್ಲಿ 80% ಸ್ನಾನಗಳನ್ನು ಗೆಲ್ಲುವ ಗುರಿ , ಗಾಂಧೀಜಿಯ ಕನಸಿನಂತೆ ಗ್ರಾಮಗಳು ರಾಮರಾಜ್ಯವಾಗಬೇಕು : ನಳಿನ್ ಕುಮಾರ್ ಕಟೀಲ್ -Vishwanews24

ಮುಂಬರುವ ಗ್ರಾಮಪಂಚಾಯತ್ ಚುನಾವಣೆಯಲ್ಲಿ ರಾಜ್ಯದಲ್ಲಿ 80% ಸ್ನಾನಗಳನ್ನು ಗೆಲ್ಲುವ ಗುರಿ , ಗಾಂಧೀಜಿಯ ಕನಸಿನಂತೆ ಗ್ರಾಮಗಳು ರಾಮರಾಜ್ಯವಾಗಬೇಕು : ನಳಿನ್ ಕುಮಾರ್ ಕಟೀಲ್ -Vishwanews24

ನ. 27 ರಿಂದ ಆರಂಭಿಸಿ ಡಿ 7 ರ ವರಗೆ ಜಿಲ್ಲಾ ಮಟ್ಟದಲ್ಲಿ ಗ್ರಾಮ ಸ್ವರಾಜ್ ಸಮಾವೇಶಗಳ ಆಯೋಜನೆ

ಉಡುಪಿ: ಮುಂಬರುವ ಗ್ರಾಮಪಂಚಾಯತ್ ಚುನಾವಣೆಯಲ್ಲಿ ರಾಜ್ಯದಲ್ಲಿ 80% ಸ್ನಾನಗಳನ್ನು ಗೆಲ್ಲುವ ಗುರಿ ಹೊಂದಲಾಗಿದ್ದು, ಗೆಲುವಿನ ಕಾರ್ಯತಂತ್ರ ಹೆಣೆಯುವ ಸಲುವಾಗಿ ನ. 27 ರಿಂದ ಆರಂಭಿಸಿ ಡಿ 7 ರ ವರಗೆ ಜಿಲ್ಲಾ ಮಟ್ಟದಲ್ಲಿ ಗ್ರಾಮ ಸ್ವರಾಜ್ ಸಮಾವೇಶಗಳನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಅವರು ಶುಕ್ರವಾರ ಉಡುಪಿಯಲ್ಲಿ ಸಮಾವೇಶಕ್ಕೆ ಚಾಲನೆ ನೀಡುವ ಮೊದಲು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಪ್ರತಿ ಜಿಲ್ಲೆಯ ಎರಡು ಕಡೆ ಸಮಾವೇಶ ನಡೆಯಲಿದೆ. ಇದಕ್ಕಾಗಿ ಸಚಿವರು, ಸಂಸದರು, ಶಾಸಕರು ಹಾಗೂ ರಾಜ್ಯಮಟ್ಟದ ಪದಾಧಿಕಾರಿಗಳನ್ನೊಳಗೊಂಡ ಆರು ತಂಡ ರಚಿಸಲಾಗಿದೆ. ಈ ತಂಡಗಳು ರಾಜ್ಯದಾದ್ಯಂತ ಪವಾಸ ಮಾಡಿ, ಚುನಾವಣೆಗೆ ಕಾರ್ಯಕರ್ತರನ್ನು ಸದ್ಮಗೊಳಿಸಲಿವೆ’ ‘ಚುನಾವಣೆಗಾಗಿ ವಾರ್ ರೂಂಗಳ ರಚನೆ, ಕಾಲ್ ಸೆಂಟರ್ಗಳ ಕಾರ್ಯಾರಂಭ ಪುತಿ ಬೂತ್ಸಲ್ಲಿ ಐವರು ಕಾರ್ಯಕರ್ತರನ್ನೊಳಗೊಂಡ ಪಂಚರತ್ನ ತಂಡದ ರಚನ, ಪೇಜ್ ಪ್ರಮುಖರ ನಿಯುಕ್ತಿ ಹಾಗೂ ಕುಟುಂಬ ಮಿಲನ ಎಂಬ ಪಂಚಸೂತ್ರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.

ಈ ಬಾರಿಯ ಗ್ರಾಮ ಪಂಚಾಯತ್‌‌ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಪೇಜ್ ಪ್ರಮುಖರನ್ನು ಆಯ್ಕೆ ಮಾಡಲಾಗಿದೆ. ಪಂಚರತ್ನ, ಪಂಚ ಸೂತ್ರದ ಎಂಬ ಹೊಸ ಕಲ್ಪನೆಯಲ್ಲಿ ಕೆಲಸ ಮಾಡುತ್ತೇವೆ. ಅಲ್ಲದೆ ಕಾಲ್ ಸೆಂಟರ್‌ ರಚನೆ, ಪ್ರತಿ ಮತಗಟ್ಟೆಗಳಲ್ಲಿ ಕುಟುಂಬ ಸಮ್ಮೇಳನ ನಡೆಸಲಾಗುತ್ತದೆ. ‌ಗ್ರಾಮ ಪಂಚಾಯತ್ ಗೆ ಹೆಚ್ಚು ಶಕ್ತಿ ತುಂಬುವ ಕೆಲಸ ಆಗಬೇಕು. ಗಾಂಧೀಜಿಯ ಕನಸಿನಂತೆ ಗ್ರಾಮಗಳು ರಾಮರಾಜ್ಯವಾಗಬೇಕು. ಕಾರ್ಯಕರ್ತರು ನಾಯಕರಾಗಬಲ್ಲ ಕ್ಷೇತ್ರ ಗ್ರಾಮ ಪಂಚಾಯತ್. ಹಾಗಾಗಿ, ಈ ಬಾರಿ ಅತೀ ಹೆಚ್ಚು ಗ್ರಾಮ ಪಂಚಾಯತಿ ಬಿಜೆಪಿ ಪಡೆಯಲು ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದೇವೆ” ಎಂದರು.

ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ, ಉಡುಪಿ-ಚಿಕ್ಕಮಗಳೂರು ಸಂಸದ ಶೋಭಾ ಕರಂದ್ಲಾಜೆ, ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್ ಮಂಡನ್, ಸಂಸದರಾದ ಮುನಿಸ್ವಾಮಿ, ರಾಜ್ಯ ಉಪಾಧ್ಯಕ್ಷರು ಶಂಕರಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಟೆಂಗಿನಕಾಯಿ, ರಾಜ್ಯ ಮಹಿಳಾ ಮೊರ್ಚಾ ಅಧ್ಯಕ್ಷರಾದ ಶ್ರೀಮತಿ ಗೀತಾ ವಿವೇಕಾನಂದ, ವಿಭಾಗ ಪೂಭಾರಿಗಳಾದ ಉದಯ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಕಾಲ್ ರಷ್ಯಾಕರ ಹೆಗ್ಯ ಹಾಗೂ ಇತರರು ಉಪಸ್ಮಿತರಿದ್ದರು.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

12 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

14 hours ago