Featured

ಮುಂಬರುವ ಗ್ರಾ. ಪಂ. ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಜೊತೆ ನಿಂತು ಬಿಜೆಪಿ ವಿರುದ್ಧ ಮತ ಚಲಾಯಿಸುತ್ತಾರೆ : ಯು ಟಿ ಖಾದರ್ -Vishwanews24

ಮುಂಬರುವ ಗ್ರಾ. ಪಂ. ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಜೊತೆ ನಿಂತು ಬಿಜೆಪಿ ಸರ್ಕಾರದ ವಿರುದ್ಧ ಮತ ಚಲಾಯಿಸುತ್ತಾರೆ : ಯು ಟಿ ಖಾದರ್ -Vishwanews24

ಗೆಲ್ಲೋದಕ್ಕಾಗಿ ಬಿಜೆಪಿ ವಾಮ ಮಾರ್ಗ ಅನುಸರಿಸುತ್ತಿದೆ..

ಮಂಗಳೂರು : ”ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಜೊತೆ ನಿಂತು ಬಿಜೆಪಿ ಸರ್ಕಾರದ ವಿರುದ್ಧ ಮತ ಚಲಾಯಿಸುತ್ತಾರೆ” ಎಂದು ಶಾಸಕ ಯು ಟಿ ಖಾದರ್‌ ಹೇಳಿದರು.

ಡಿಸೆಂಬರ್ 14 ರ ಸೋಮವಾರ ಇಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಯು ಟಿ ಖಾದರ್, ”ಬಿಜೆಪಿ ಸರಕಾರದ ಬಗ್ಗೆ ಜನ ಬೇಸತ್ತು ಹೋಗಿದ್ದಾರೆ. ಹಾಗಾಗಿ ಜನರು ಬಿಜೆಪಿ ಸರ್ಕಾರದ ವಿರುದ್ಧ ಮತ ಚಲಾಯಿಸುತ್ತಾರೆ” ಎಂದರು

”ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಯಾವುದೇ ಪಡಿತರ ಚೀಟಿ ವಿತರಿಸಿಲ್ಲ. ಯಾವುದೇ ಮನೆಗಳನ್ನು ಮಂಜೂರು ಮಾಡಿಲ್ಲ. ಶಾಲೆ ಮತ್ತು ಕಾಲೇಜುಗಳನ್ನು ಪುನಃ ತೆರೆಯುವ ಗೊಂದಲ ಇನ್ನೂ ಇದೆ. ರೈತ ವಿರೋಧಿ ನೀತಿ ಸೇರಿದಂತೆ ಹಲವು ನೀತಿಗಳು ಜನರ ಮೇಲೆ ತೀವ್ರ ಪರಿಣಾಮ ಬೀರಿದೆ. ಜನರು ಬಿಜೆಪಿಗೆ ಮತ ನೀಡುವಂತ ಯಾವ ಕಾರ್ಯವನ್ನು ಬಿಜೆಪಿ ಮಾಡಿದೆ” ಎಂದು ಖಾದರ್‌ ಪ್ರಶ್ನಿಸಿದರು.

”ಸರ್ಕಾರದ ಯಾವುದೇ ಯೋಜನೆಗಳು ಜನರಿಗೆ ತಲುಪಿಲ್ಲ. ಹಾಗೆಯೇ ಸರ್ಕಾರ ಜನ ವಿರೋಧಿ ನೀತಿಗಳನ್ನು ಪರಿಚಯಿಸುತ್ತಿದ್ದಾರೆ. ಸರಕುಗಳು, ಪೆಟ್ರೋಲ್, ಡೀಸೆಲ್ ಮೇಲಿನ ಬೆಲೆ ಏರಿಕೆ ಜನರ ಮೇಲೆ ಪರಿಣಾಮ ಬೀರಿದೆ. ಆದ್ದರಿಂದ ಜನರು ಬಿಜೆಪಿ ಸರ್ಕಾರದ ವಿರುದ್ಧ ಮತ ಚಲಾಯಿಸುತ್ತಾರೆ ಎಂಬ ವಿಶ್ವಾಸ ನಮಗಿದೆ” ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ”ಸರ್ಕಾರ ಆಡಳಿತವನ್ನು ದುರುಪಯೋಗಪಡಿಸಿಕೊಂಡಿದೆ. ಚುನಾವಣೆಗೆ ಮುನ್ನ ಮೀಸಲಾತಿ ಕ್ಷೇತ್ರಗಳಲ್ಲಿ ಬದಲಾವಣೆಗಳನ್ನು ತಂದಿದೆ. ವಾರ್ಡ್‌ಗಳನ್ನು ಅವೈಜ್ಞಾನಿಕವಾಗಿ ವಿಂಗಡಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ತಮ್ಮ ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವಂತೆ ಬೆದರಿಸುವ, ಅಪಹರಿಸುವ ಕೆಲಸ ನಡೆಯುತ್ತಿದೆ. ಗೆಲ್ಲೋದಕ್ಕಾಗಿ ಬಿಜೆಪಿ ವಾಮ ಮಾರ್ಗ ಅನುಸರಿಸುತ್ತಿದೆ” ಎಂದು ಆರೋಪಿಸಿದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಐವನ್‌ ಡಿ ಸೋಜಾ ಉಪಸ್ಥಿತರಿದ್ದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

17 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

18 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

18 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

19 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

19 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

19 hours ago