Featured

ಮುಂಬರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿದ 50 ಶಾಸಕರ ಪೈಕಿ ಒಬ್ಬ ಶಾಸಕ ಸೋತರೂ ರಾಜಕೀಯ ತೊರೆಯುತ್ತೇನೆ : ಏಕನಾಥ್ ಶಿಂಧೆ

ಮುಂಬರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿದ 50 ಶಾಸಕರ ಪೈಕಿ ಒಬ್ಬ ಶಾಸಕ ಸೋತರೂ ರಾಜಕೀಯ ತೊರೆಯುತ್ತೇನೆ : ಏಕನಾಥ್ ಶಿಂಧೆ

ಮುಂಬಯಿ: ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿದ 50 ಶಾಸಕರ ಪೈಕಿ ಒಬ್ಬ ಶಾಸಕ ಸೋತರೂ ಶಾಶ್ವತವಾಗಿ ರಾಜಕೀಯ ತೊರೆಯುತ್ತೇನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ಶುಕ್ರವಾರ ತಮ್ಮ ಶಾಸಕರ ಗುಂಪು ಏಕನಾಥ್ ಶಿಂಧೆ ಅವರನ್ನು ಸನ್ಮಾನಿಸಲಾಯಿತು, ಈ ವೇಳೆ 50 ಶಾಸಕರು ತಮ್ಮನ್ನು ಬೆಂಬಲಿಸಲು ತೆಗೆದುಕೊಂಡ ರಿಸ್ಕ್ ಬಗ್ಗೆ ಮಾತನಾಡಿದರು. ಈ ಎಲ್ಲಾ ಶಾಸಕರ ಆಗು ಹೋಗುಗಳ ಬಗ್ಗೆ ಗಮನ ಹರಿಸುವುದು ತಮ್ಮ ಕರ್ತವ್ಯ , ಅವರ ಕ್ಷೇತ್ರಗಳ ಸಮಸ್ಯೆಗಳನ್ನು ಪರಿಹರಿಸಲು ಸಮಯನೀಡುತ್ತೇನೆ.

ಶಿವಸೇನೆಯ ಹಿಂದಿನ ಇತಿಹಾಸದ ಪ್ರಕಾರ ಉದ್ಧವ್ ಠಾಕ್ರೆ ವಿರುದ್ಧ ಹೋದ ಎಲ್ಲಾ 50 ಶಾಸಕರು ಈಗ ಚುನಾವಣೆಯಲ್ಲಿ ಸೋಲುತ್ತಾರೆ ಎಂದು ಜನರು ಹೇಳುತ್ತಾರೆ. ಆದರೆ ಒಬ್ಬ ಶಾಸಕ ಚುನಾವಣೆಯಲ್ಲಿ ಸೋತರೂ, ನಾನು ಶಾಶ್ವತವಾಗಿ ರಾಜಕೀಯ ಸನ್ಯಾಸ ಸ್ವೀಕರಿಸುತ್ತೇನೆ ಎಂದು ಶಿಂಧೆ ಹೇಳಿದ್ದಾರೆ.

ಆರಂಭದಲ್ಲಿ ಕೆಲವೇ ಶಾಸಕರು ನಮ್ಮೊಂದಿಗಿದ್ದರು, ನಂತರ 50 ಮಂದಿ ಇದ್ದರು. ನಮ್ಮ ವಿರುದ್ಧ ಇದ್ದವರು ನಮ್ಮ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದರು. ಆದರೆ ಅವರ ಡರ್ಟಿ ಗೇಮ್ ಗೆ ಯಾರೋಬ್ಬರು ಬೆಂಬಲ ನೀಡಲಿಲ್ಲ. ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ್ದ ನಿರ್ಧಾರವನ್ನು ಜನರು ಸ್ವಾಗತಿಸಿದ್ದಾರೆ ಎಂದು ತಿಳಿಸಿದ್ದಾರೆ.

“ಸೂರತ್ ಮತ್ತು ಗುವಾಹಟಿಯಲ್ಲಿ ಇಷ್ಟು ದಿನ ನಿದ್ದೆ ಬರಲಿಲ್ಲ. ನಾನು 1.00 ಗಂಟೆಗೆ ಮಲಗಲು ಮತ್ತು ಬೆಳಗ್ಗೆ 3 ಗಂಟೆಗೆ ಎದ್ದೇಳುತ್ತಿದ್ದೆ. ಇದು ನನ್ನ ಜೀವನದಲ್ಲಿ ಒಂದು ಅತಿ ನಿರ್ಣಾಯಕ ಕ್ಷಣವಾಗಿತ್ತು. ನಾನು ನನ್ನ ಭವಿಷ್ಯದ ಬಗ್ಗೆ ಚಿಂತಿಸಲಿಲ್ಲ ಆದರೆ ಉದ್ಧವ್ ಠಾಕ್ರೆ ಅವರನ್ನು ಬಿಟ್ಟು ನನ್ನೊಂದಿಗೆ ಬಂದಿದ್ದ 50 ಶಾಸಕರ ಭವಿಷ್ಯದ ಬಗ್ಗೆ ನನಗೆ ಕಾಳಜಿ ಇತ್ತು. ಅವರು ನನ್ನ ನಾಯಕತ್ವದಲ್ಲಿ ವಿಶ್ವಾಸ ತೋರಿಸಿದರು ಎಂದು ಶಿಂಧೆ ಹೇಳಿದ್ದಾರೆ.

ಮಹಾ ವಿಕಾಸ್ ಅಘಾಡಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸೇನಾ ಶಾಸಕರನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಳ್ಳಲಾಗಿತ್ತು ಎಂದು ಅವರು ಉಲ್ಲೇಖಿಸಿದ್ದಾರೆ. ಎನ್ ಸಿಪಿ ಶಾಸಕರಿಗೆ ಮಾತ್ರ ಅನುದಾನ ಬಿಡುಗಡೆ ಮಾಡಲಾಗುತ್ತಿತ್ತು ಎಂದು ಆರೋಪಿಸಿದ್ದಾರೆ. ನಾನು ಸದ್ಯ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿದ್ದು ಯಾರೋಬ್ಬರು ಸಮಸ್ಯೆ ನೀಡಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

19 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

19 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

19 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

19 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

20 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago