ಮಂಗಳೂರು : ಮುಂಬರುವ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಜಯಸಾಧಿಸುತ್ತದೆ. ಫಲಿತಾಂಶದ ದಿನ ಅಂದರೆ ನ. 14 ರಂದು ಕಾಂಗ್ರೆಸ್ ಕಣ್ಣೀರು ಸುರಿಸಲಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಬಿ ಜನಾರ್ದನ ಪೂಜಾರಿ ಹೇಳಿದ್ದಾರೆ.
ನ.8ರ ಶುಕ್ರವಾರದಂದು ನಗರದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಜನಾರ್ದನ ಪೂಜಾರಿ, “ಕಾಂಗ್ರೆಸ್ ಪಕ್ಷ ಅತ್ಯುತ್ತಮವಾದುದು, ಆದರೆ ಅಲ್ಲಿನ ನಾಯಕರುಗಳಿಗೆ ಹೇಗೆ ಮಾತನಾಡಬೇಕೆನ್ನುವುದೇ ತಿಳಿದಿಲ್ಲ ಹೀಗಾಗಿ ಪಾಲಿಕೆ ವ್ಯಾಪ್ತಿಯಲ್ಲಿ ಬಿಜೆಪಿ ಚುನಾವಣೆ ಗೆಲ್ಲುತ್ತದೆ ಮತ್ತು ನವೆಂಬರ್ 14 ನಿರ್ಣಾಯಕ ದಿನವಾದ್ದರಿಂದ ಕಾಂಗ್ರೆಸ್ ಅದರ ನೇರ ಪರಿಣಾಮಗಳನ್ನು ಎದುರಿಸಲಿದೆ ಎಂದರು.
ಸಿದ್ಧರಾಮಯ್ಯ ಆಡಳಿತ ಕಾಲದಲ್ಲಿ ಮಂಗಳೂರಿಗೆ 5300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,”ಇದು ಸುಳ್ಳು ಎಂದು ಸಿದ್ದರಾಮಯ್ಯ ಸತ್ಯ ಮಾತನಾಡಿದ್ದಾರೆಯೇ?” ಆರೋಪಿಸಿದರು.
ಮದ್ಯದಂಗಡಿಗಳಿಗಿರುವ ದೇವರ ಹೆಸರನ್ನು ತೆಗೆದುಹಾಕುವ ಪ್ರಸ್ತಾಪದ ಬಗ್ಗೆ ಕೇಳಿದಾಗ, ಬಿ ಜನಾರ್ಧನ ಪೂಜಾರಿ, “ಮದ್ಯದಂಗಡಿಗಾಗಿ ದೇವರ ಹೆಸರನ್ನು ತೆಗೆದುಹಾಕುವ ಪ್ರಸ್ತಾಪದ ಸರಿಯಾದ ನಿರ್ಧಾರವಾಗಿದೆ” ಎಂದರು.
ಕಾಂಗ್ರೆಸ್ ಮುಖಂಡರಾದ ಕಲ್ಲಿಗೆ ತಾರನಾಥ್ ಶೆಟ್ಟಿ, ವಿಜಯ್ ಕುಮಾರ್ ಶೆಟ್ಟಿ ಮತ್ತು ಇತರರು ಉಪಸ್ಥಿತರಿದ್ದರು.
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…