ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ 30-35  ಕ್ಷೇತ್ರಗಳಲ್ಲಿ ಸ್ಥಾನ ಮೀಸಲು: ಕುಮಾರಸ್ವಾಮಿ -Vishwanews24

Featured, ರಾಜ್ಯ ನ್ಯೂಸ್

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ 30-35  ಕ್ಷೇತ್ರಗಳಲ್ಲಿ ಸ್ಥಾನ ಮೀಸಲು: ಕುಮಾರಸ್ವಾಮಿ -Vishwanews24

ರಾಮನಗರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 30-35 ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ನೀಡಲಾಗುವುದು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಬಿಡದಿಯಲ್ಲಿ ನಡೆದಿರುವ ಜೆಡಿಎಸ್ ಸಂಘಟನಾ ಕಾರ್ಯಾಗಾರದಲ್ಲಿ ಬುಧವಾರ ಮಹಿಳಾ ಕಾರ್ಯಕರ್ತರ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಈಗಾಗಲೇ 7-8 ಕ್ಷೇತ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದೇವೆ. 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಶೇ 33 ಮಹಿಳಾ ಮೀಸಲಾತಿ ವಿಧೇಯಕಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ ಎಂದರು.

http://ಶೀರೂರು : ಅಪ್ರಾಪ್ತ ಪೀಠಾಧಿಪತಿ ನೇಮಕ ಸಂಬಂಧಿಸಿದ ಅರ್ಜಿ ಹೈಕೋರ್ಟ್ ನಿಂದ ವಜಾ: ಮಠದಲ್ಲಿ ಸಂಭ್ರಮಾಚರಣೆ – Vishwanews24

ಬಿಜೆಪಿ, ಕಾಂಗ್ರೆಸ್‌ಗೆ ಹೋಲಿಸಿದರೆ ನಮ್ಮಲ್ಲಿ ಮಹಿಳಾ ಘಟಕ ಹಿಂದೆ ಉಳಿದಿದೆ. ಅದನ್ನು ಸರಿಪಡಿಸಿ ಬೂತ್ ಮಟ್ಟದಿಂದ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ ಎಂದರು.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ, ಶಾಸಕಿ ಅನಿತಾ ಕುಮಾರಸ್ವಾಮಿ ಹಾಗು ಪಕ್ಷದ ಮಹಿಳಾ ಘಟಕದ ಪದಾಧಿಕಾರಿಗಳು ಇದ್ದರು