ಮುಂಬೈ, : ಮಹಾರಾಷ್ಟ್ರದ ಅಲಿಬಾಗ್‌ನಲ್ಲಿರುವ 100 ಕೋ.ರೂ.ಗೂ ಅಧಿಕ ವೌಲ್ಯದ ಸಮುದ್ರಕ್ಕೆ ಮುಖ ಮಾಡಿರುವ ಬೃಹತ್ ಬಂಗ್ಲೆಯನ್ನು ಸ್ಪೋಟಕ ಇಟ್ಟು ಧ್ವಂಸಗೊಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.
ಭಾರತದ ಬ್ಯಾಂಕ್‌ಗಳಲ್ಲಿ ಸಾಲ ಮರು ಪಾವತಿ ಮಾಡದೇ ವಿದೇಶಕ್ಕೆ ಪರಾರಿಯಾಗಿರುವ ಕೋಟ್ಯಧಿಪತಿ ನೀರವ್ ಮೋದಿ ಕರಾವಳಿ ನಿಯಂತ್ರಣ ವಲಯ ನಿಯಮಗಳು ಹಾಗೂ ಮಹಾರಾಷ್ಟ್ರದ ರಾಜ್ಯದ ನಿಯಮಾವಳಿಗಳನ್ನು ಉಲ್ಲಂಘಿಸಿ 33,000 ಚದರ ಅಡಿ ಐಷಾರಾಮಿ ಬಂಗ್ಲೆಯನ್ನು ಅನಧಿಕೃತವಾಗಿ ಕಟ್ಟಿದ್ದರು.
ಬಂಗ್ಲೆಯ ಅಡಿಪಾಯ ಗಟ್ಟ್ಟಿಮುಟ್ಟಾಗಿದ್ದ ಕಾರಣ ಬಂಗ್ಲೆ ಒಡೆಯಲು ಬಂದ ಅಧಿಕಾರಿಗಳು ಬೃಹತ್ ಯಂತ್ರಗಳನ್ನು ಬಳಸಿ ಕಟ್ಟಡವನ್ನು ಕೆಡವಿದ್ದಾರೆ. ಬಂಗ್ಲೆ ಕೆಡೆವಲು ಒಂದು ತಿಂಗಳು ಸಮಯ ಹಿಡಿದಿದೆ. ಕಟ್ಟಡ ಧ್ವಂಸ ಕೆಲಸ ಚುರುಕುಗೊಳಿಸಲು ಡೈನಾಮೈಟ್‌ಗಳಂತಹ ನಿಯಂತ್ರಿತ ಸ್ಫೋಟಕವನ್ನು ಬಳಸಲಾಗಿದೆ. 2009ರಲ್ಲಿ ಶಂಭುರಾಜೆ ಯುವ ಕ್ರಾಂತಿ ಸಂಸ್ಥೆಯೊಂದು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಬಾಂಬೆ ಹೈಕೋರ್ಟ್ ನೀರವ್ ಮೋದಿ ನಿರ್ಮಿಸಿದ್ದ ಅನಧಿಕೃತ ಬಂಗ್ಲೆಯನ್ನು ಕೆಡವು ಹಾಕಲು ಆದೇಶಿಸಿತ್ತು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…