ಮುಂಬೈ: ವೇಗವಾಗಿ ಬಂದ ಕಾರೊಂದು ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಮೂವರು ಮೃತಪಟ್ಟು ಆರು ಮಂದಿ ಗಾಯಗೊಂಡಿರುವ ಘಟನೆ ಮುಂಬೈನ ಟೋಲ್ ಪ್ಲಾಜಾದಲ್ಲಿ ಸಂಭವಿಸಿದೆ.
ಗುರುವಾರ ರಾತ್ರಿ ಕಾರು ವರ್ಲಿಯಿಂದ ಬಾಂದ್ರಾ ಕಡೆಗೆ ಅತೀ ವೇಗವಾಗಿ ಚಲಾಯಿಸಿದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವೇಗವಾಗಿ ಬಂದ ಇನ್ನೋವಾ ಕಾರು ಮೊದಲು ಮರ್ಸಿಡಿಸ್ ಕಾರಿಗೆ ಡಿಕ್ಕಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಲ್ಲಿಂದ ಮುಂದುವರೆದ ಕಾರು ಟೋಲ್ ಪ್ಲಾಜಾ ಬಳಿ ನಿಂತಿದ್ದ ಮೂರು ನಾಲ್ಕು ಕಾರುಗಳಿಗೆ ಡಿಕ್ಕಿ ಹೊಡೆದು ನಿಂತಿದೆ ಎಂದು ಡಿಸಿಪಿ ಕೃಷ್ಣಕಾಂತ್ ಉಪಾಧ್ಯಾಯ ಹೇಳಿದ್ದಾರೆ.
ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಸ್ಥಿರವಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡವರಲ್ಲಿ ಒಬ್ಬರು ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಇತರ ಐವರನ್ನು ಭಾಭಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಅಪಘಾತದ ತೀವ್ರತೆಗೆ ಕಾರುಗಳು ನುಜ್ಜುಗುಜ್ಜಾಗಿದ್ದು ಇನ್ನೋವಾ ಕಾರು ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಅರೋಗ್ಯ ಸುಧಾರಿಸಿದ ಬಳಿಕ ಆತನನ್ನು ವಶಕ್ಕೆ ಪಡೆಯಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್‌ಫಾಸ್ಟ್…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…
ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕಾಂತಾವರ ಕ್ರಾಸ್…