Featured

ಮುಂಬೈ: ಒಎನ್‌ ಜಿಸಿ ಘಟಕದಲ್ಲಿ ಅಗ್ನಿ ಅವಗಢ -Vishwanews24

ಮುಂಬೈ: ಒಎನ್‌ ಜಿಸಿ ಘಟಕದಲ್ಲಿ ಅಗ್ನಿ ಅವಗಢ ಸಂಭವಿಸಿದ್ದು, ಮೂವರು ಮೃತಪಟ್ಟು ಹಲವರು ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ನವಿ ಮುಂಬೈನ ಉರಾನ್‌ ನಲ್ಲಿ ನಡೆದಿದೆ.

ಬೆಳಗ್ಗೆ 7 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಒಎನ್ ಜಿಸಿ ಗ್ಯಾಸ್ ಸಂಸ್ಕರಣ ಘಟಕದಲ್ಲಿ ಬೆಂಕಿ ನಂದಿಸಲು ಅಗ್ನಿ ಶಾಮಕ ದಳದ ಸಿಬ್ಬಂದಿ ಅಗಮಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಟ್ವಿಟರ್​ ಮೂಲಕ ಈ ವಿಷಯ ಖಚಿತಪಡಿಸಿರುವ ಒಎನ್​ಜಿಸಿ ಅಧಿಕಾರಿಗಳು, ಮಳೆನೀರುಗಾಲುವೆಯಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಹೊತ್ತಿಕೊಂಡಿದೆ. ಒಎನ್​ಜಿಸಿಯ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ತಂಡ ತಕ್ಷಣವೇ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದೆ. ಬೆಂಕಿಯನ್ನು ಈಗಾಗಲೆ ನಿಯಂತ್ರಿಸಲಾಗಿದೆ. ತೈಲ ಸಂಸ್ಕರಣೆ ಕಾರ್ಯ ಅಬಾಧಿತವಾಗಿ ಮುಂದುವರಿದಿದೆ. ಅನಿಲ ಸಾಗಣೆಯ ದಿಕ್ಕನ್ನು ಹಜೀರಾ ಘಟಕಕ್ಕೆ ಬದಲಿಸಲಾಗಿದೆ ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago