ಮುಂಬೈ: ಒಎನ್ ಜಿಸಿ ಘಟಕದಲ್ಲಿ ಅಗ್ನಿ ಅವಗಢ ಸಂಭವಿಸಿದ್ದು, ಮೂವರು ಮೃತಪಟ್ಟು ಹಲವರು ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ನವಿ ಮುಂಬೈನ ಉರಾನ್ ನಲ್ಲಿ ನಡೆದಿದೆ.
ಬೆಳಗ್ಗೆ 7 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಒಎನ್ ಜಿಸಿ ಗ್ಯಾಸ್ ಸಂಸ್ಕರಣ ಘಟಕದಲ್ಲಿ ಬೆಂಕಿ ನಂದಿಸಲು ಅಗ್ನಿ ಶಾಮಕ ದಳದ ಸಿಬ್ಬಂದಿ ಅಗಮಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಟ್ವಿಟರ್ ಮೂಲಕ ಈ ವಿಷಯ ಖಚಿತಪಡಿಸಿರುವ ಒಎನ್ಜಿಸಿ ಅಧಿಕಾರಿಗಳು, ಮಳೆನೀರುಗಾಲುವೆಯಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಹೊತ್ತಿಕೊಂಡಿದೆ. ಒಎನ್ಜಿಸಿಯ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ತಂಡ ತಕ್ಷಣವೇ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದೆ. ಬೆಂಕಿಯನ್ನು ಈಗಾಗಲೆ ನಿಯಂತ್ರಿಸಲಾಗಿದೆ. ತೈಲ ಸಂಸ್ಕರಣೆ ಕಾರ್ಯ ಅಬಾಧಿತವಾಗಿ ಮುಂದುವರಿದಿದೆ. ಅನಿಲ ಸಾಗಣೆಯ ದಿಕ್ಕನ್ನು ಹಜೀರಾ ಘಟಕಕ್ಕೆ ಬದಲಿಸಲಾಗಿದೆ ಎಂದು ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…