ಮುಂಬೈ: ಕೋವಿಡ್-19 ಹೊಸ ರೂಪಾಂತರ ತಳಿ ಓಮಿಕ್ರಾನ್ ಭೀತಿಯಿಂದಾಗಿ ಮುಂಬೈನಲ್ಲಿ ಶಾಲೆಗಳ ಪುನರಾರಂಭವನ್ನು ಮುಂದೂಡಲಾಗಿದೆ.
ಮುಂಬೈನಲ್ಲಿ 1 ರಿಂದ 7ನೇ ತರಗತಿಯ ಶಾಲೆಗಳು ನಾಳೆ ಅಂದರೆ ಡಿಸೆಂಬರ್ 1 ಆರಂಭವಾಗಬೇಕಿದ್ದ ಶಾಲೆಗಳನ್ನು ಡಿಸೆಂಬರ್ 15 ರಿಂದ ತೆರೆಯುವುದಾಗಿ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಮಂಗಳವಾರ ತಿಳಿಸಿದೆ. ಆದರೆ ಮಹಾರಾಷ್ಟ್ರದ ಕೆಲವು ಶಾಲೆಗಳನ್ನು ನಾಳೆಯಿಂದಲೇ ತೆರೆಯಲಾಗುತ್ತಿದೆ.
ಕೋವಿಡ್-19 ಹೊಸ ರೂಪಾಂತರ ತಳಿ ಓಮಿಕ್ರಾನ್‍ನ ಆತಂಕದಿಂದ ಹೊಸ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ. ಅಪಾಯದಲ್ಲಿರುವ ದೇಶಗಳಿಂದ ಆಗಮಿಸುವ ಪ್ರಯಾಣಿಕರ ಬಗ್ಗೆ ರಾಜ್ಯ ಸಚಿವ ಸಂಪುಟ ಕಳವಳ ವ್ಯಕ್ತಪಡಿಸಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ಸೋಮವಾರ ಹೇಳಿದ್ದಾರೆ.
ವಿಶ್ವದಲ್ಲಿ ಹಬ್ಬುತ್ತಿರುವ ಕೋವಿಡ್-19ನ ತಳಿ ಓಮಿಕ್ರಾನ್ ಅನ್ನು ತಡೆಗಟ್ಟುವ ದೃಷ್ಟಿಯಿಂದ 1-7ನೇ ತರಗತಿಯವರೆಗೂ ಶಾಲೆಗಳನ್ನು ಡಿಸೆಂಬರ್ 1ರ ಬದಲಾಗಿ ಡಿಸೆಂಬರ್ 15 ರಿಂದ ಪುನಾರಂಭಿಸಲಾಗುತ್ತದೆ ಎಂದು ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಮಾಧ್ಯಮಕ್ಕೆ ತಿಳಿಸಿದೆ.
ಭಾರತದಲ್ಲಿ ಯಾವುದೇ ಓಮಿಕ್ರಾನ್ ಪ್ರಕರಣಗಳು ವರದಿಯಾಗಿಲ್ಲ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಇಂದು ಕೋವಿಡ್-19 ರೂಪಾಂತರ ತಳಿ ಓಮಿಕ್ರಾನ್ ಕುರಿತು ರಾಜ್ಯಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…