ಮುಂಬೈ: ಖ್ಯಾತ ಸಂತೂರ್ ವಾದಕ, ಪದ್ಮಶ್ರೀ, ಪದ್ಮ ವಿಭೂಷಣ ಪಂಡಿತ್ ಶಿವಕುಮಾರ್ ಶರ್ಮ ವಿಧಿವಶರಾಗಿದ್ದಾರೆ. ಇವರಿಗೆ 84 ವರ್ವ ವಯಸ್ಸಾಗಿತ್ತು. ಇವರು ಕೆಲ ತಿಂಗಳುಗಳಿಂದ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದರು. ಇದರಿಂದ ಅವರು ಡಯಾಲಿಸಿಸ್‌ಗೆ ಒಳಗಾಗಿದ್ದರು.
ಸಂತೂರ್ ವಾದ್ಯಕ್ಕೆ ಪಂಡಿತ್ ಶಿವಕುಮಾರ್ ಶರ್ಮ ಶಾಸ್ತ್ರೀಯ ಸ್ಥಾನಮಾನ ನೀಡಿದರು. ಸಿತಾರ್, ಸರೋದ್‌ನಂತೆ ಅದನ್ನು ಪ್ರಸಿದ್ಧಿಗೊಳಿಸಿದ ಕೀರ್ತಿ ಇವರದ್ದು. ಶರ್ಮ ಅವರು ಸಂಗೀತ ಸಂಯೋಜಕ ಕೂಡ ಆಗಿದ್ದರು.
ಪಂಡಿತ್ ಶಿವಕುಮಾರ್ ಶರ್ಮ ಅವರು, ಸಿಲ್ಸಿಲಾ, ಚಾಂದಿನಿ ಮತ್ತು ಡರ್ ಸೇರಿದಂತೆ ಹಲವಾರು ಖ್ಯಾತ ಹಿಂದಿ ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದಾರೆ. 1991 ರಲ್ಲಿ ಪ್ರತಿಷ್ಠಿತ ಪದ್ಮಶ್ರೀ ಮತ್ತು 2001ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.
1956ರ ಝಣಕ್ ಝಣಕ್ ಪಾಯಲ್ ಬಜೆ ಚಿತ್ರದ ಒಂದು ದೃಶ್ಯಕ್ಕೆ ಹಿನ್ನೆಲೆ ಸಂಗೀತ ಸಂಯೋಜಿಸಿದ್ದು ಇದು ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದೆ. ನಾಲ್ಕು ವರ್ಷಗಳ ನಂತರ ಇವರು ಮೊದಲ ಬಾರಿಗೆ ಒಬ್ಬರೇ ಆಲ್ಬಂ ರೆಕಾರ್ಡ್ ಮಾಡಿದ್ದರು.
ಶಿವಕುಮಾರ್ ಶರ್ಮ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಸಂಗೀತ ಕ್ಷೇತ್ರಕ್ಕೆ ಇವರು ನೀಡಿರುವ ಕೊಡುಗೆ ಅಪಾರ. ಇವರ ಅಗಲಿಕೆಯಿಂದ ಸಾಂಸ್ಕೃತಿಕ ಲೋಕ ಬಡವಾಗಿದೆ ಎಂದು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…