ಮುಂಬೈ: ಇಲ್ಲಿನ ಮುಲುಂಡ್‌ನಲ್ಲಿ ಶನಿವಾರ (ಫೆ.14) ಮಧ್ಯಾಹ್ನ ನಿರ್ಮಾಣ ಹಂತದ ಮೆಟ್ರೋ ಕಂಬದ ಒಂದು ಭಾಗ ಕುಸಿದು, ಚಲಿಸುತ್ತಿದ್ದ ಆಟೋರಿಕ್ಷಾದ ಮೇಲೆ ಬಿದ್ದ ಘಟನೆ ನಡೆದಿದೆ. ಅವಶೇಷಗಳ ಕೆಳಗೆ ಸಿಲುಕಿ ಒಬ್ಬ ವ್ಯಕ್ತಿ ಸಾವನ್ನಪ್ಪಿ, ಇತರ ಮೂವರು ಗಾಯಗೊಂಡರು. ಕಾರಿನ ಒಂದು ಭಾಗವೂ ಅವಶೇಷಗಳ ಅಡಿಯಲ್ಲಿ ನಜ್ಜುಗುಜ್ಜಾಗಿದೆ.
ಜಾನ್ಸನ್ ಮತ್ತು ಜಾನ್ಸನ್ ಕಾರ್ಖಾನೆಯ ಮುಂಭಾಗದಲ್ಲಿರುವ ಆರ್ಟರಿಯಲ್ ಎಲ್‌ಬಿಎಸ್ ರಸ್ತೆಯಲ್ಲಿ ಮಧ್ಯಾಹ್ನ 12:20 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ನಿರ್ಮಾಣ ಕಾರ್ಯದ ಸಮಯದಲ್ಲಿ ಸಿಮೆಂಟ್ ರಚನೆಯ ಒಂದು ಭಾಗ ಕುಸಿದು ನೇರವಾಗಿ ಚಲಿಸುತ್ತಿದ್ದ ಆಟೋರಿಕ್ಷಾದ ಮೇಲೆ ಬಿದ್ದಿದೆ. ಮೃತರು ಮತ್ತು ಗಾಯಗೊಂಡವರು ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕರು ಎಂದು ವರದಿಯಾಗಿದೆ.
ಇದನ್ನೂ ಓದಿ:
“ಕಂಬದ ಸಿಮೆಂಟ್ ಫ್ಲ್ಯಾಬ್ ಕುಸಿದು ಕೆಳಗಿದ್ದ ಆಟೋರಿಕ್ಷಾದ ಮೇಲೆ ಬಿದ್ದು, ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಮೂರರಿಂದ ನಾಲ್ಕು ಜನರು ಗಾಯಗೊಂಡಿರುವ ಶಂಕೆ ಇದೆ. ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಹಾಗೂ ಮೆಟ್ರೋ ರೈಲು ಮಾರ್ಗವನ್ನು (ಲೈನ್ 4) ನಿರ್ಮಿಸುತ್ತಿರುವ ಕಂಪನಿಯ ಸಿಬ್ಬಂದಿ ಘಟನೆಯ ನಂತರದ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡಲು ಸ್ಥಳದಲ್ಲಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…