ಮುಂಬಾಯಿ : ಮುಂಬಾಯಿಯಲ್ಲಿರುವ ಮಾಫಿಯಾ ಡಾನ್ ದಾವೂದ್ ಇಬ್ರಾಹಿಂ ಮನೆಯನ್ನು ಇದುವರೆಗೆ ನೆಲಸಮಗೊಳಿಸಲು ಸಾಧ್ಯವಾಗದ ಮಹಾರಾಷ್ಟ್ರ ಸರ್ಕಾರಕ್ಕೆ ನಟಿ ಕಂಗನಾ ರಾವತ್ ಕಚೇರಿ ಕೆಡವಲು ಏನು ನೈತಿಕತೆ ಇದೆ ಎಂದು ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರು ಉದ್ಧವ್ ಠಾಕ್ರೆ ವಿರುದ್ಧ ಕಿಡಿಕಾರಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಫಡ್ನವಿಸ್ ಅವರು, ಭೇಂಡಿ ಬಜಾರ್ ನಲ್ಲಿರುವ ಭೂಗತ ಪಾತಕಿ ದಾವೂದ್ ಮನೆಯನ್ನು ನೆಲಸಮ ಮಾಡುವ ಆದೇಶದ ಬಳಿಕವೂ, ಇದಕ್ಕಾಗಿ ಸಾಕಷ್ಟು ಮಾನವಶಕ್ತಿ ಇಲ್ಲ ಎಂದು ನೀವು ಅಫಿಡವಿಟ್ ಸಲ್ಲಿಸಿದ್ದೀರಿ. ಆದರೆ ಕಂಗನಾ ಅವರ ಕಟ್ಟಡವನ್ನು ನೆಲಸಮಗೊಳಿಸಲು ನಿಮಗೆ ಎಲ್ಲಿಂದ ಕಾರ್ಮಿಕರು ಸಿಕ್ಕಿದ್ದಾರೆ ಎಂದು ಉದ್ಧವ್ ಠಾಕ್ರೆ ಅವರನ್ನು ನೇರವಾಗಿ ಪ್ರಶ್ನಿಸಿದ್ದಾರೆ.
ಮಹಾರಾಷ್ಟ್ರ ಸರಕಾರವು ಕಂಗನಾ ವಿರುದ್ಧ ಹೋರಾಡುವ ಬದಲು ಕೋವಿಡ್ ವಿರುದ್ಧ ಹೋರಾಡಿದ್ದರೆ ಇಷ್ಟು ಹೊತ್ತಿಗೆ ಕೊರೋನಾ ಸೋಂಕು ಹತೋಟಿಗೆ ಬರುತ್ತಿತ್ತು ಎಂದು ಸರ್ಕಾರವನ್ನು ಟೀಕಿಸಿರುವ ಫಡ್ನವೀಸ್ ಅವರು, ನಟಿ ಕಂಗನಾ ಹೇಳಿಕೆ ದೊಡ್ಡ ವಿಷಯವೇ ಅಲ್ಲ, ಆದರೆ ಮಹಾ ಸರ್ಕಾರ ಅದನ್ನು ದೊಡ್ಡ ವಿಷಯವನ್ನಾಗಿ ಬಿಂಬಿಸುತ್ತಿದೆ ಎಂದು ಆರೋಪಿಸದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…