ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರದ ದೆಲ್ಗಾಂವ್ ಮಾಹಿ ಬುಲ್ದಾನಾದ ನಿವಾಸಿಗಳಾದ ಮಂಗೇಶ್ ವಾಯಲ್ (35), ಅಭಯ್ ಶಿಂಗ್ನೆ (22) ಬಂಧಿತ ಆರೋಪಿಗಳು. ಇಬ್ಬರನ್ನೂ ಬುಲ್ದಾನಾ ಪೊಲೀಸರು ಬಂಧಿಸಿದ್ದಾರೆ ಎಂದು ಡಿಸಿಪಿ ದತ್ತ ನಲವಾಡೆ ತಿಳಿಸಿದ್ದಾರೆ.
ಏಕನಾಥ್ ಶಿಂಧೆ ಅವರ ಕಾರಿಗೆ ಬಾಂಬ್ ಹಾಕುವುದಾಗಿ ಗೋರೆಗಾಂವ್ ಮತ್ತು ಜೆ.ಜೆ ಮಾರ್ಗ್ ಪೊಲೀಸ್ ಠಾಣೆಗಳಿಗೆ ಇ-ಮೇಲ್ ಬೆದರಿಕೆ ಸಂದೇಶಗಳು ಬಂದಿದ್ದವು. ಮರಾಠಿ ಭಾಷೆಯಲ್ಲಿದ್ದ ಇ-ಮೇಲ್‌ಗಳನ್ನು ಬೇರೆ ಬೇರೆ ಹೆಸರುಗಳಲ್ಲಿ ಎರಡೂ ಪೊಲೀಸ್ ಠಾಣೆಗಳಿಗೆ ಆರೋಪಿಗಳು ಕಳುಹಿಸಿದ್ದರು. ಇ-ಮೇಲ್ ಐಪಿ ಅಡ್ರಸ್‌ಗಳನ್ನು ಟ್ರ್ಯಾಕ್ ಮಾಡಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಅಪರಿಚಿತರಿಂದ ಬಂದ ಇ-ಮೇಲ್ ವಿರುದ್ಧ ಗೋರೆಗಾಂವ್ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್‌ಗಳ 351 (3) ಮತ್ತು 353 (2) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…