Featured

ಮುಂಬೈ : ಡಿಸಿಎಂ ಏಕನಾಥ್ ಶಿಂಧೆಗೆ ಬಾಂಬ್ ಬೆದರಿಕೆ ಪ್ರಕರಣ :  ಇಬ್ಬರ ಬಂಧನ – vishwanews24

ಮುಂಬೈ : ಡಿಸಿಎಂ ಏಕನಾಥ್ ಶಿಂಧೆಗೆ ಬಾಂಬ್ ಬೆದರಿಕೆ ಪ್ರಕರಣ :  ಇಬ್ಬರ ಬಂಧನ

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಗೆ  ಬಾಂಬ್ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮುಂಬೈ ಪೊಲೀಸರು  ಬಂಧಿಸಿದ್ದಾರೆ.

ಮಹಾರಾಷ್ಟ್ರದ ದೆಲ್ಗಾಂವ್ ಮಾಹಿ ಬುಲ್ದಾನಾದ ನಿವಾಸಿಗಳಾದ ಮಂಗೇಶ್ ವಾಯಲ್ (35), ಅಭಯ್ ಶಿಂಗ್ನೆ (22) ಬಂಧಿತ ಆರೋಪಿಗಳು. ಇಬ್ಬರನ್ನೂ ಬುಲ್ದಾನಾ ಪೊಲೀಸರು ಬಂಧಿಸಿದ್ದಾರೆ ಎಂದು ಡಿಸಿಪಿ ದತ್ತ ನಲವಾಡೆ ತಿಳಿಸಿದ್ದಾರೆ.

ಏಕನಾಥ್ ಶಿಂಧೆ ಅವರ ಕಾರಿಗೆ ಬಾಂಬ್ ಹಾಕುವುದಾಗಿ ಗೋರೆಗಾಂವ್ ಮತ್ತು ಜೆ.ಜೆ ಮಾರ್ಗ್ ಪೊಲೀಸ್ ಠಾಣೆಗಳಿಗೆ ಇ-ಮೇಲ್ ಬೆದರಿಕೆ ಸಂದೇಶಗಳು ಬಂದಿದ್ದವು. ಮರಾಠಿ ಭಾಷೆಯಲ್ಲಿದ್ದ ಇ-ಮೇಲ್‌ಗಳನ್ನು ಬೇರೆ ಬೇರೆ ಹೆಸರುಗಳಲ್ಲಿ ಎರಡೂ ಪೊಲೀಸ್ ಠಾಣೆಗಳಿಗೆ ಆರೋಪಿಗಳು ಕಳುಹಿಸಿದ್ದರು. ಇ-ಮೇಲ್ ಐಪಿ ಅಡ್ರಸ್‌ಗಳನ್ನು ಟ್ರ್ಯಾಕ್‌ ಮಾಡಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ಅಪರಿಚಿತರಿಂದ ಬಂದ ಇ-ಮೇಲ್ ವಿರುದ್ಧ ಗೋರೆಗಾಂವ್ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್‌ಗಳ 351 (3) ಮತ್ತು 353 (2) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

8 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

8 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

8 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

8 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

9 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

9 hours ago