ಭಾರತದ ಇತಿಹಾಸದ ಅತ್ಯಂತ ಕೆಟ್ಟ ಭಯೋತ್ಪಾದಕ ದಾಳಿ ಎನಿಸಿಕೊಂಡಿದ್ದ ಮುಂಬೈ ದಾಳಿ ಒಟ್ಟು ನಾಲ್ಕು ದಿನಗಳ ಕಾಲ ನಡೆದಿತ್ತು. ನವೆಂಬರ್ 26 ರಿಂದ 29ರವರೆಗೆ ನಡೆದಿದ್ದ ದಾಳಿಯಲ್ಲಿ ಸಾಕಷ್ಟು ಸಾವು ನೋವು ಮಾತ್ರವಲ್ಲದೆ, ಜಾಗತಿಕ ಮಟ್ಟದಲ್ಲಿ ಭಾರತದಲ್ಲಿ ಪ್ರಜೆಗಳ ರಕ್ಷಣೆಯ ಬಗ್ಗೆಯೇ ಅನುಮಾನ ಹುಟ್ಟಿಕೊಂಡಿತ್ತು. ಈ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ಈ ಕರಾಳ ದಿನವನ್ನು ನೆನಪಿಸಿಕೊಂಡಿದ್ದಾರೆ.
ನಿಮ್ಮ ಪ್ರೀತಿಪಾತ್ರರು ಮತ್ತು ಕುಟುಂಬಗಳ ನೋವನ್ನು ನಾವೂ ಕೂಡ ಹಂಚಿಕೊಳ್ಳುತ್ತೇವೆ. ಕರ್ತವ್ಯದ ಸಾಲಿನಲ್ಲಿ ವೀರಾವೇಶದ ಹೋರಾಟ ನಡೆಸಿಸ ಅತ್ಯುನ್ನತ ತ್ಯಾಗ ಮಾಡಿದ ಭದ್ರತಾ ಸಿಬ್ಬಂದಿಗೆ ರಾಷ್ಟ್ರವು ಗೌರವ ಸಲ್ಲಿಸುತ್ತದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವಿಟರ್‌ನಲ್ಲಿ ಬರೆದಿದ್ದಾರೆ. “ಇಂದು ಮುಂಬೈ ಮೇಲೆ ನಡೆದ ದಾಳಿಯ ಕರಾಳ ದಿನ. 14 ವರ್ಷಗಳ ಹಿಂದೆ ಭಾರತದ ಸಂವಿಧಾನ ಹಾಗೂ ಜನರ ಹಕ್ಕುಗಳನ್ನು ಆಚರಣೆ ಮಾಡುತ್ತಿದ್ದ ದಿನದಂದು, ಶತ್ರುಗಳು ಮಾನವೀಯತೆಯ ಮೇಲೆ ಘೋರವಾದ ದಾಳಿ ಮಾಡಿದ್ದರು. ಈ ದಾಳಿಯಲ್ಲಿ ಮೃತರಾದವರಿಗೆ ನಾನು ಸಂತಾಪ ಸೂಚಿಸುತ್ತೇನೆ’ ಎಂದು ನವದೆಹಲಿಯಲ್ಲಿ ಸಂವಿಧಾನ ದಿನದಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ತಮ್ಮ ಟ್ವಿಟರ್ ಪುಟದಲ್ಲಿ ಎರಡು ನಿಮಿಷಗಳ ವಿಡಿಯೋ ಹಂಚಿಕೊಳ್ಳುವ ಮೂಲಕ ಅ ದಿನವನ್ನು ನೆನಪಿಸಿಕೊಂಡಿದ್ದಾರೆ. ಕಳೆದ ತಿಂಗಳು ತಾಜ್ ಹೋಟೆಲ್‌ನ ಲಾಬಿಯಲ್ಲಿ ನಡೆದ ವಿಶ್ವ ಸಂಸ್ಥೆಯ ಭದ್ರತಾ ಸಮಿತಿಯ ಕಾರ್ಯಕ್ರಮದಲ್ಲಿ ತಾವು ಆಡಿದ ಮಾತುಗಳನ್ನು ಇದರಲ್ಲಿ ಸೇರಿಸಿದ್ದಾರೆ. 2008ರ ಮುಂಬೈ ದಾಳಿಯ ವೇಳೆ ಭಯೋತ್ಪಾದಕರು ಇದೇ ಹೋಟೆಲ್‌ಅನ್ನು ಪ್ಮರುಖವಾಗಿ ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು.
“ಭಯೋತ್ಪಾದನೆ ಮಾನವೀಯತೆಗೆ ಬೆದರಿಕೆ. ಇಂದು, 26/11 ರಂದು, ಆ ದಾಳಿಯಲ್ಲಿ ಸಾವು ಕಂಡವನ್ನು ಭಾರತ ಸ್ಮರಿಸಿಕೊಳ್ಳುತ್ತದೆ. ಈ ದಾಳಿಯ ಯೋಜನೆ ಮತ್ತು ಮೇಲ್ವಿಚಾರಣೆ ನಡೆಸಿದವರನ್ನು ನ್ಯಾಯಾಂಗಕ್ಕೆ ತರಬೇಕು. ಜಗತ್ತಿನಾದ್ಯಂತ ಭಯೋತ್ಪಾದನೆಗೆ ಬಲಿಯಾದ ಪ್ರತಿಯೊಬ್ಬರಿಗೂ ನಾವು ಋಣಿಯಾಗಿದ್ದೇವೆ’ ಎಂದು ಜೈಶಂಕರ್ ಅವರು ವೀಡಿಯೊದೊಂದಿಗೆ ಟ್ವೀಟ್ ಮಾಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಟ್ವೀಟ್ ಮಾಡಿದ್ದು, 26/11 ಮುಂಬೈ ದಾಳಿಯಲ್ಲಿ ಮೃತರಾದವರಿಗೆ ಸಂತಾಪ ಸೂಚಿಸುತ್ತೇನೆ. ಭಯೋತ್ಪಾದಕರ ವಿರುದ್ಧದ ಹೋರಾಟದಲ್ಲಿ ಅತ್ಯುನ್ನತ ತ್ಯಾಗ ಮಾಡಿದ ಧೀರ ಭದ್ರತಾ ಸಿಬ್ಬಂದಿಯನ್ನು ಈ ವೇಳೆ ನೆನಪಿಸಿಕೊಳ್ಳುತ್ತೇನೆ. ಭಯೋತ್ಪಾದನೆಯ ವಿರುದ್ಧ ನಾವೆಲ್ಲರೂ ಒಟ್ಟಾಗ ಹೋರಾಡಬೇಕು ಅನ್ನೋದನ್ನು ಈ ದಿನ ನಮಗೆ ಸಂದೇಶ ನೀಡುತ್ತದೆ’ ಎಂದಿದ್ದಾರೆ.
ಇನ್ನು ದೇಶದ ಜನ ಸೋಶಿಯಲ್ ಮೀಡಿಯಾದಲ್ಲಿ ‘ನೆವರ್ ಫಾರ್ಗಟನ್, ವಿಲ್ ನೆವರ್ ಫಾರ್ಗೆಟ್’ ಎಂದು ಮುಂಬೈ ದಾಳಿಯನ್ನು, ದಾಳಿಯಲ್ಲಿ ಮೃತರಾದ ಭದ್ರತಾ ಸಿಬ್ಬಂದಿಯನ್ನು ನೆನಪಿಸಿಕೊಂಡಿದ್ದಾರೆ. ಅದರೊಂದಿಗೆ ಈ ದಾಳಿಯಲ್ಲಿ ಮಡಿದ ಎನ್‌ಎಸ್‌ಜಿ ಕಮಾಂಡೋ ಕರ್ನಾಟಕದ ಸಂದೀಪ್ ಉನ್ನಿಕೃಷ್ಣನ್ ಅವರನ್ನು ಕನ್ನಡಿಗರು ನೆನಪಿಸಿಕೊಂಡಿದ್ದಾರೆ.
ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…
ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…
ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…
ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ…
ಅ.11 ರಿಂದ 20ರವರೆಗೆ ಮಂಗಳೂರು-ಉಡುಪಿ ಕೆಎಸ್‌ಆರ್‌ಟಿಸಿಯಿಂದ ದಸರಾ ಸ್ಪೆಷಲ್ ಟೂರ್ ಪ್ಯಾಕೇಜ್ ಮಂಗಳೂರು: ನವರಾತ್ರಿ ಹಾಗೂ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ…