Featured

ಮುಂಬೈ : ದೇಶದ ಅತಿ ಉದ್ದದ ಸಮುದ್ರ ಸೇತುವೆ ಇಂದು ಮೋದಿಯಿಂದ  ಲೋಕಾರ್ಪಣೆ – vishwanews24

ದೇಶದ ಅತಿ ಉದ್ದದ ಸಮುದ್ರ ಸೇತುವೆ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಇಂದು ಮೋದಿಯಿಂದ  ಲೋಕಾರ್ಪಣೆ

60 ವರ್ಷದ ಹಿಂದೆ ಸಿದ್ಧಗೊಂಡ ಕನಸಿನ ಯೋಜನೆ

2016ರಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದ ಮೋದಿ

ಮುಂಬೈ: 60 ವರ್ಷದ ಹಿಂದೆ ಸಿದ್ಧಗೊಂಡ ಕನಸಿನ ಯೋಜನೆ, ದೇಶದ ಅತಿ ಉದ್ದದ ಸಮುದ್ರ ಸೇತುವೆಯಾದ  ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಅನ್ನು ಇಂದು ಪ್ರಧಾನಿ ನರೇಂದ್ರ ಮೋದಿ  ಲೋಕಾರ್ಪಣೆ ಮಾಡಲಿದ್ದಾರೆ .

ಮುಂಬೈನ ಸೆವ್ರಿ ಮತ್ತು ರಾಯಗಡ ಜಿಲ್ಲೆಯ ನ್ಹವಾ ಶೇವಾ ಪ್ರದೇಶದ ನಡುವಿನ 21.8 ಕಿಲೋಮೀಟರ್ ಉದ್ದದ ಸೇತುವೆಯು ಪ್ರಸ್ತುತ ಎರಡು ಗಂಟೆಗಳಿಂದ ಸುಮಾರು 15-20 ನಿಮಿಷಗಳಿಗೆ ಪ್ರಯಾಣದ ಅವಧಿಯನ್ನು ಕಡಿಮೆ ಮಾಡಲಿದೆ.

ರಾಜ್ಯದ ಎರಡು ದೊಡ್ಡ ನಗರಗಳನ್ನು ಸಂಪರ್ಕಿಸುವ ಮುಂಬೈ ಪುಣೆ ಎಕ್ಸ್‌ಪ್ರೆಸ್‌ವೇಗೆ MTHL ಮತ್ತಷ್ಟು ಸಂಪರ್ಕ ಕಲ್ಪಿಸುತ್ತದೆ. MTHL 6 ಲೇನ್ ಮಾರ್ಗ ಹೊಂದಿದೆ. ಸಮುದ್ರದ ಮೇಲೆ 16.50 ಕಿಲೋಮೀಟರ್ ಮತ್ತು ಭೂಮಿಯಲ್ಲಿ 5.50 ಕಿಲೋಮೀಟರ್ ಉದ್ದವನ್ನು ಹೊಂದಿದೆ. ಈ ಸೇತುವೆಗೆ ʼಅಟಲ್ ಬಿಹಾರಿ ವಾಜಪೇಯಿ ಸೇವ್ರಿ-ನವ ಶೇವಾ ಅಟಲ್ ಸೇತುʼ ಎಂದು ಹೆಸರನ್ನು ಇಡಲಾಗಿದೆ.

ಸೇತುವೆಯ ವಿಶೇಷತೆ ಏನು?

ಈ ಯೋಜನೆಯು ಸರಿಸುಮಾರು 21 ಕಿ.ಮೀ. ಉದ್ದದ 6 ಲೇನ್‌ (3+3-ಲೇನ್, 2 ತುರ್ತು ಲೇನ್) ಸೇತುವೆಯನ್ನು ಮುಂಬೈ ನಗರದ ಶಿವಡಿ ಮತ್ತು ಮುಖ್ಯ ಭೂಭಾಗದ ನ್ಹಾವಾವನ್ನು ಸಂಪರ್ಕಿಸುತ್ತದೆ. ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ, ಮುಂಬೈ-ಗೋವಾ ಎಕ್ಸ್‌ಪ್ರೆಸ್‌ವೇ, ವಿರಾರ್‌-ರಾಯ್‌ಘಡರ್‌ ಕಾರಿಡರ್‌ ಸಂಪರ್ಕ ಇನ್ನು ಮುಂದೆ ಸುಲಭವಾಗಲಿದೆ.

ಈ ರಸ್ತೆಯಲ್ಲಿ 4 ಚಕ್ರದ ವಾಹನಗಳಿಗೆ ಗಂಟೆಗೆ ಗರಿಷ್ಠ 100 ಕಿ.ಮೀ ವೇಗದ ಮಿತಿಯನ್ನು ನಿಗದಿಪಡಿಸಲಾಗಿದೆ. ಬೈಕ್‌, ಅಟೋರಿಕ್ಷಾ, ಟ್ರ್ಯಾಕ್ಟರ್‌ ಸಂಚಾರವನ್ನು ನಿರ್ಬಂಧಿಸಲಾಗಿದೆ.

1962 ರಲ್ಲೇ ಎರಡು ನಗರಗಳ ಮಧ್ಯೆ ಸಂಚಾರ ವ್ಯವಸ್ಥೆ ಮಾಡಲು ಯೋಜನೆ ರೂಪಿಸಲಾಗಿತ್ತು. ಈ ಯೋಜನೆ ಜಾರಿ ಸಂಬಂಧ ಹಲವು ಅಧ್ಯಯನಗಳು ನಡೆದಿದ್ದವು. 2008ರಲ್ಲಿ ಮಹಾರಾಷ್ಟ್ರ ಸರ್ಕಾರ ಈ ಯೋಜನೆ ಜಾರಿಗೆ ಸಂಬಂಧ ಟೆಂಡರ್‌ ಆಹ್ವಾನಿಸಿತ್ತು. ಈ ಯೋಜನೆಯಲ್ಲಿ ರಾಜಕೀಯದ ಗಾಳಿ ಬೀಸಿ ಭಾರೀ ಟೀಕೆ ಬಂದ ಹಿನ್ನೆಲೆಯಲ್ಲಿ ಟೆಂಡರ್‌ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಕೊನೆಗೆ ಎಲ್ಲಾ ಇಲಾಖೆಗಳ ಅನುಮತಿ ಪಡೆದ ಬಳಿಕ 2016ರ ಡಿಸೆಂಬರ್‌ 24 ರಂದು ಪ್ರಧಾನಿ ನರೇಂದ್ರ ಮೋದಿ ಈ ಯೋಜನೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಭೂಮಿ ಸ್ವಾಧೀನ ಪಡಿಸಿದ ಬಳಿಕ 2018ರ ಏಪ್ರಿಲ್‌ 24 ರಂದು ಕಾಮಗಾರಿ ಆರಂಭವಾಗಿತ್ತು.

ನಿಗದಿ ಪ್ರಕಾರ ಸೆಪ್ಟೆಂಬರ್‌ 22, 2022ಕ್ಕೆ ಮುಕ್ತಾಯವಾಗಬೇಕಿತ್ತು. ಆದರೆ ಕೋವಿಡ್‌, ಲಾಕ್‌ಡೌನ್‌ ನಂತರ ಕಾರ್ಮಿಕರ ಸಮಸ್ಯೆಯಿಂದಾಗಿ ಯೋಜನೆ ಮುಂದಕ್ಕೆ ಹೋಗಿ ಈಗ ಜನವರಿಯಲ್ಲಿ ಉದ್ಘಾಟನೆಯಾಗುತ್ತಿದೆ.

ಆರಂಭದಲ್ಲಿ ಈ ಯೋಜನೆ ನಿರ್ಮಾಣಕ್ಕೆ 14,712.70 ಕೋಟಿ ರೂ. ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಈಗ ಈ ವೆಚ್ಚ 16,904.43 ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ಆರ್‌ಟಿಐ ಅಡಿ ಉತ್ತರ ಸಿಕ್ಕಿತ್ತು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

12 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

13 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

13 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

13 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

14 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

14 hours ago