Featured

ಮುಂಬೈ: ಧಾರಾಕಾರ ಮಳೆ:  ಧರೆಗುರುಳಿದ ಬಹುಮಹಡಿ ಕಟ್ಟಡ; 11 ಮಂದಿ ಸಾವು, ಹಲವರಿಗೆ ಗಂಭೀರ ಗಾಯ – Vishwanews24

ಮುಂಬೈ: ಧಾರಾಕಾರ ಮಳೆ:  ಧರೆಗುರುಳಿದ ಬಹುಮಹಡಿ ಕಟ್ಟಡ; 11 ಮಂದಿ ಸಾವು, ಹಲವರಿಗೆ ಗಂಭೀರ ಗಾಯ – Vishwanews24

ಮುಂಬೈ: ನಾಲ್ಕು ಮಹಡಿಯ ಕಟ್ಟಡವೊಂದು ಧರೆಗುರುಳಿದ ಪರಿಣಾಮ ಹನ್ನೊಂದು ಮಂದಿ ಸಾವನ್ನಪ್ಪಿದ ಘಟನೆ ಮುಂಬೈನ ಪಶ್ಚಿಮ ಮಲಾಡ್ ನ ಮಾಲ್ವಾನಿ ಪ್ರದೇಶದಲ್ಲಿ ನಡೆದಿದೆ.

ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದೊಂದು ನಾಲ್ಕು ಮಹಡಿಯ ವಸತಿ ಕಟ್ಟಡವಾಗಿದ್ದು, ದುರ್ಘಟನೆ ನಡೆದ ಸಂದರ್ಭದಲ್ಲಿ ಮಕ್ಕಳು ಸೇರಿದಂತೆ ಹಲವು ಮಂದಿ ಇಲ್ಲಿದ್ದರು. ಘಟನೆ ನಡೆದ ಕೆಲವೇ ಕ್ಷಣದಲ್ಲಿ ಅಗ್ನಿ ಶಾಮಕ ದಳ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಒಳಗೆ ಸಿಲುಕಿಕೊಂಡವರನ್ನು ರಕ್ಷಣೆ ಮಾಡಲಾಗಿದೆ.

ಇದರ ಬಳಿಯಿರುವ ಇನ್ನೂ ಮೂರು ಕಟ್ಟಡಗಳು ಆತಂಕದ ಪರಿಸ್ಥಿತಿಯಲ್ಲಿದ್ದು, ಅಲ್ಲಿದ್ದ ಎಲ್ಲರನ್ನೂ ಕೂಡಲೇ ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ ಎಂದು ಬೃಹನ್ ಮುಂಬೈ ನಗರಪಾಲಿಕೆ ಅಧಿಕಾರಿಗಳು ಹೇಳಿದ್ದಾರೆ.

ಬುಧವಾರ ನಗರದಲ್ಲಿ ಸುರಿದ ಭಾರಿ ಮಳೆಯ ಕಾರಣದಿಂದ ಈ ಬಹುಮಹಡಿ ಕಟ್ಟಡ ಕುಸಿದಿದೆ ಎಂದು ಮಹಾರಾಷ್ಟ್ರದ ಸಚಿವ ಅಸ್ಲಾಂ ಶೇಖ್ ಹೇಳಿದ್ದಾರೆ. ಮುಂಬೈನಲ್ಲಿ ಬುಧವಾರ ಧಾರಾಕಾರ ಮಳೆಯಾಗಿತ್ತು. ಹಲವು ಪ್ರದೇಶಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿತ್ತು. ಇದರಿಂದ ರಸ್ತೆ ಮತ್ತು ರೈಲು ಸಂಚಾರಕ್ಕೂ ಅಡಚಣೆಯಾಗಿತ್ತು.

Vishwa News 24

Recent Posts

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

10 minutes ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

42 minutes ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

14 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

18 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

20 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

21 hours ago