ಮುಂಬೈ: ಮಹಾರಾಷ್ಟ್ರದ ಮುಂಬೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿಂದು ಬೆಳಗ್ಗೆ ಭಾರೀ ಮಳೆಯಿಂದಾಗಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಲವಾರು ಪ್ರದೇಶಗಳು ಜಲಾವೃತಗೊಂಡಿವೆ. ಭಾರೀ ಪ್ರಮಾಣದ ಟ್ರಾಫಿಕ್ ಜಾಮ್ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಅಧಿಕಾರಿಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ನಗರದಲ್ಲಿ ಗರಿಷ್ಠ 54 ಮಿ.ಮೀ. ಗಿಂತ ಹೆಚ್ಚು ಮಳೆಯಾಗಿದೆ. ಇನ್ನೂ ಪೂರ್ವ ಮತ್ತು ಪಶ್ಚಿಮ ಉಪನಗರಗಳಲ್ಲಿ ಕ್ರಮವಾಗಿ 72 ಮಿ.ಮೀ. ಮತ್ತು 65 ಮಿ.ಮೀ. ಮಳೆಯಾಗಿದೆ. ಹಾಗಾಗಿ ಮುಂಬೈ ಮಹಾನಗರ ಪಾಲಿಕೆಯು, ಅನಗತ್ಯ ಓಡಾಟ ನಿಲ್ಲಿಸುವಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಮೀನುಗಾರರು ಕಡಲಿಗಿಳಿಯದಂತೆ ಸೂಚಿಸಿದೆ.
ವಿಮಾನ ಹಾರಟಕ್ಕೂ ತೊಂದರೆ
ಮಳೆಯಿಂದಾಗಿ ಮುಂಬೈನ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಮಾಡುವ ಮುನ್ನ 9 ವಿಮಾನಗಳು ಹಲವು ಸುತ್ತುಗಳನ್ನು ಹಾಕಿ ನಂತರ ಪ್ರಯಾಸದಿಂದ ಇಳಿದಿವೆ. ಒಂದು ವಿಮಾನವನ್ನ ಸೂರತ್‌ಗೆ ಮಾರ್ಗ ಬದಲಿಸಲಾಗಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.
ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು:
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮಳೆ ಹೆಚ್ಚಳವಾಗಿದೆ. ಕಳೆದ ಮೂರು ದಿನಗಳಿಂದ ನಗರದಲ್ಲಿ ಮಳೆ ಸುರಿಯುತ್ತಿದ್ದು ಹಲವು ರಸ್ತೆಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.
ರೆಡ್ ಅಲರ್ಟ್ ಘೋಷಣೆ
ಮುಂಬೈ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ 2 ದಿನಗಳಿಂದ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದೆ. ಹೀಗಾಗಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕೆಲವು ಪ್ರದೇಶದಲ್ಲಿ ನಿರೀಕ್ಷೆಗೂ ಮೀರಿದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಎಚ್ಚರಿಕೆ ನೀಡಿದೆ. ಮಂಗಳವಾರ ಸಹ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹೇಳಿದೆ.
ರೈಲು ಸಂಚಾರದಲ್ಲಿ ವಿಳಂಬ
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕೇಂದ್ರೀಯ ರೈಲ್ವೆಯ ಉಪನಗರ ರೈಲು ಸಂಚಾರದಲ್ಲೂ ಸಮಸ್ಯೆ ಎದುರಾಗಿದೆ. ಕೆಲವು ಪ್ರದೇಶಗಳಲ್ಲಿ ಹಳಿಗಳು ಮುಳುಗಿವೆ. ಕುರ್ಲ ಮತ್ತು ತಿಲಕ್ ನಗರ ನಿಲ್ದಾಣಗಳ ನಡುವೆ ಚಾರ್ಜಿಂಗ್ ಪಾಯಿಂಟ್‌ಗಳೇ ಗೋಚರಿಸದಂತಾಗಿದೆ. ಹೀಗಾಗಿ ಕೆಲ ರೈಲುಗಳ ಸಂಚಾರದಲ್ಲಿ ವಿಳಂಬವಾಗಿದೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…