Featured

ಮುಂಬೈ : ನಿಲ್ಲದ ಮಹಾ ಮಳೆಯ ಅಬ್ಬರ; ರೆಡ್‌ ಅಲರ್ಟ್‌ ಘೋಷಣೆ – vishwanews24

ಮುಂಬೈ : ನಿಲ್ಲದ ಮಹಾ ಮಳೆಯ ಅಬ್ಬರ; ರೆಡ್‌ ಅಲರ್ಟ್‌ ಘೋಷಣೆ

ಮುಳುಗಿದ ರೈಲ್ವೆ ಹಳಿಗಳು; ವಿಮಾನ ಹಾರಾಟಕ್ಕೂ ತೊಂದರೆ , ಜನಜೀವನ ಅಸ್ತವ್ಯಸ್ತ

ಮುಂಬೈ: ಮಹಾರಾಷ್ಟ್ರದ ಮುಂಬೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿಂದು ಬೆಳಗ್ಗೆ ಭಾರೀ ಮಳೆಯಿಂದಾಗಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಲವಾರು ಪ್ರದೇಶಗಳು ಜಲಾವೃತಗೊಂಡಿವೆ. ಭಾರೀ ಪ್ರಮಾಣದ ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಅಧಿಕಾರಿಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ನಗರದಲ್ಲಿ ಗರಿಷ್ಠ 54 ಮಿ.ಮೀ. ಗಿಂತ ಹೆಚ್ಚು ಮಳೆಯಾಗಿದೆ. ಇನ್ನೂ ಪೂರ್ವ ಮತ್ತು ಪಶ್ಚಿಮ ಉಪನಗರಗಳಲ್ಲಿ ಕ್ರಮವಾಗಿ 72 ಮಿ.ಮೀ. ಮತ್ತು 65 ಮಿ.ಮೀ. ಮಳೆಯಾಗಿದೆ. ಹಾಗಾಗಿ ಮುಂಬೈ ಮಹಾನಗರ ಪಾಲಿಕೆಯು, ಅನಗತ್ಯ ಓಡಾಟ ನಿಲ್ಲಿಸುವಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಮೀನುಗಾರರು ಕಡಲಿಗಿಳಿಯದಂತೆ ಸೂಚಿಸಿದೆ.

ವಿಮಾನ ಹಾರಟಕ್ಕೂ ತೊಂದರೆ
ಮಳೆಯಿಂದಾಗಿ ಮುಂಬೈನ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ಮಾಡುವ ಮುನ್ನ 9 ವಿಮಾನಗಳು ಹಲವು ಸುತ್ತುಗಳನ್ನು ಹಾಕಿ ನಂತರ ಪ್ರಯಾಸದಿಂದ ಇಳಿದಿವೆ. ಒಂದು ವಿಮಾನವನ್ನ ಸೂರತ್‌ಗೆ ಮಾರ್ಗ ಬದಲಿಸಲಾಗಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು:
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮಳೆ ಹೆಚ್ಚಳವಾಗಿದೆ. ಕಳೆದ ಮೂರು ದಿನಗಳಿಂದ ನಗರದಲ್ಲಿ ಮಳೆ ಸುರಿಯುತ್ತಿದ್ದು ಹಲವು ರಸ್ತೆಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.

ರೆಡ್‌ ಅಲರ್ಟ್‌ ಘೋಷಣೆ
ಮುಂಬೈ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ 2 ದಿನಗಳಿಂದ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದೆ. ಹೀಗಾಗಿ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಕೆಲವು ಪ್ರದೇಶದಲ್ಲಿ ನಿರೀಕ್ಷೆಗೂ ಮೀರಿದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಎಚ್ಚರಿಕೆ ನೀಡಿದೆ. ಮಂಗಳವಾರ ಸಹ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹೇಳಿದೆ.

ರೈಲು ಸಂಚಾರದಲ್ಲಿ ವಿಳಂಬ
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕೇಂದ್ರೀಯ ರೈಲ್ವೆಯ ಉಪನಗರ ರೈಲು ಸಂಚಾರದಲ್ಲೂ ಸಮಸ್ಯೆ ಎದುರಾಗಿದೆ. ಕೆಲವು ಪ್ರದೇಶಗಳಲ್ಲಿ ಹಳಿಗಳು ಮುಳುಗಿವೆ. ಕುರ್ಲ ಮತ್ತು ತಿಲಕ್ ನಗರ ನಿಲ್ದಾಣಗಳ ನಡುವೆ ಚಾರ್ಜಿಂಗ್‌ ಪಾಯಿಂಟ್‌ಗಳೇ ಗೋಚರಿಸದಂತಾಗಿದೆ. ಹೀಗಾಗಿ ಕೆಲ ರೈಲುಗಳ ಸಂಚಾರದಲ್ಲಿ ವಿಳಂಬವಾಗಿದೆ.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

2 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

2 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

20 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago