Featured

ಮುಂಬೈ : ಬಾಲಿವುಡ್  ಖ್ಯಾತ ಹಿರಿಯ ನಟ , ನಿರ್ದೇಶಕನ ಸತೀಶ್ ಕೌಶಿಕ್ ಹೃದಯಾಘಾತದಿಂದ ನಿಧನ – Vishwanews24

ಮುಂಬೈ : ಬಾಲಿವುಡ್  ಖ್ಯಾತ ಹಿರಿಯ ನಟ , ನಿರ್ದೇಶಕನ ಸತೀಶ್ ಕೌಶಿಕ್ ಹೃದಯಾಘಾತದಿಂದ ನಿಧನ

ಮುಂಬೈ : ಬಾಲಿವುಡ್ ನ ಖ್ಯಾತ ಹಿರಿಯ ನಟ ನಿರ್ದೇಶಕನ ಸತೀಸ್ ಕೌಶಿಕ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು.

ಹರಿಯಾಣದ ಮಹೇಂದ್ರಗಢದಲ್ಲಿ 1956ರ ಏಪ್ರಿಲ್ 13ರಂದು ಸತೀಶ್ ಕೌಶಿಕ್ ಜನಿಸಿದರು. 1972 ರಲ್ಲಿ ದೆಹಲಿಯ ಕಿರೋರಿ ಮಾಲ್ ಕಾಲೇಜಿನಲ್ಲಿ ಪದವಿ ಪಡೆದರು. ಕೌಶಿಕ್ ನವದೆಹಲಿಯ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ ಮತ್ತು ಪುಣೆಯ ಫಿಲ್ಮ್ ಅಂಡ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಸಿನಿಮಾ ಕೇತ್ರಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಅಧ್ಯಯನ ನಡೆಸಿದ್ದಾರೆ. ಇವರು ನಿರ್ದೇಶಕ, ರಂಗಭೂಮಿ ನಟ, ಹಾಸ್ಯನಟ, ಚಿತ್ರಕಥೆಗಾರರಾಗಿಯೂ ಹೆಚ್ಚು ಮನ್ನಣೆಯನ್ನು ಗಳಿಸಿದ್ದರು. 1990ರಲ್ಲಿ ತೆರೆ ಕಂಡ ‘ರಾಮ್ ಲಖನ್’ ಮತ್ತು 1997ರಲ್ಲಿ ಬಂದ ‘ಸಾಜನ್ ಚಲೇ ಸಸುರಲ್’ ಚಿತ್ರಗಳಲ್ಲಿನ ಅವರ ಅತ್ಯುತ್ತಮ ಹಾಸ್ಯನಟನೆಗಾಗಿ ಎರಡು ಬಾರಿ ಫಿಲ್ಮ ಫೇರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮಿಸ್ಟರ್‌ ಇಂಡಿಯಾ ಚಿತ್ರದಲ್ಲಿ ಅವರ ‘ಕ್ಯಾಲೆಂಡರ್’ ಪಾತ್ರ ಮತ್ತು ‘ದೀವಾನಾ ಮಸ್ತಾನಾ’ದಲ್ಲಿ ‘ಪಪ್ಪು ಪೇಜರ್’ ಪಾತ್ರಗಳಿಂದಲೇ ಹೆಚ್ಚು ಜನಪ್ರಿಯತೆಯನ್ನು ಪಡೆದಿದ್ದರು. ಕೌಶಿಕ್ ಅವರು ಹರಿಯಾಣ ಚಲನಚಿತ್ರ ಪ್ರಚಾರ ಮಂಡಳಿಯ ಅಧ್ಯಕ್ಷರಾಗಿ ಮತ್ತು ಪುಣೆಯ ಫಿಲ್ಮ್ ಅಂಡ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸತೀಶ್ ಕೌಶಿಕ್ ಅವರ ನಿಧನಕ್ಕೆ ಭಾರತೀಯ ಚಿತ್ರರಂಗ ಕಂಬನಿ ಮಿಡಿದಿದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

6 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

7 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

8 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

8 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

8 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

8 hours ago