Featured

ಮುಂಬೈ:  ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ ಪ್ರಕರಣ : ಇಬ್ಬರು ಆರೋಪಿಗಳ ಬಂಧನ – Vishwanews24

ಮುಂಬೈ:  ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ರ ಮುಂಬೈ ನಿವಾಸದ ಹೊರಗೆ ಗುಂಡಿನ ದಾಳಿ ನಡೆಸಿದ್ದ ಆರೋಪಿಯೂ ಸೇರಿದಂತೆ ಇಬ್ಬರು ವ್ಯಕ್ತಿಗಳನ್ನು ಗುಜರಾತ್ ನಲ್ಲಿ ಬಂಧಿಸಲಾಗಿದೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬಿಹಾರದ ನಿವಾಸಿಗಳಾದ ವಿಕ್ಕಿ ಗುಪ್ತಾ (24) ಹಾಗೂ ಸಾಗರ್ ಪಾಲ್ (21) ಎಂದು ಗುರುತಿಸಲಾಗಿದ್ದು, ಅವರನ್ನು ಗುಜರಾತ್ ನ ಕುಛ್ ಜಿಲ್ಲೆಯ ಮಾತಾ ನೊ ಮಧ್ ಗ್ರಾಮದಿಂದ ಬಂಧಿಸಲಾಗಿದೆ ಎಂದು ಪಶ್ಚಿಮ ಕುಛ್ ವಲಯದ ಉಪ ಪೊಲೀಸ್ ಮಹಾ ನಿರೀಕ್ಷಕ ಮಹೇಂದ್ರ ಬಗಾದಿಯ ತಿಳಿಸಿದ್ದಾರೆ.

ತಾಂತ್ರಿಕ ನಿಗಾವಣೆಯ ಮೂಲಕ ಪಶ್ಚಿಮ ಕುಛ್ ಹಾಗೂ ಮುಂಬೈ ಪೊಲೀಸರ ಜಂಟಿ ತಂಡವು ಆರೋಪಿಗಳನ್ನು ಸೆರೆ ಹಿಡಿದಿದೆ ಎಂದು ಅವರು ಹೇಳಿದ್ದಾರೆ.

ಮುಂಬೈನಲ್ಲಿ ದೂರು ದಾಖಲಾಗಿರುವುದರಿಂದ, ಅವರನ್ನು ಮುಂಬೈ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ ಎಂದು ಬಗಾದಿಯಾ ತಿಳಿಸಿದ್ದಾರೆ.

ಸಲ್ಮಾನ್ ಖಾನ್ ನಿವಾಸದೆದುರು ಗುಂಡಿನ ದಾಳಿ ನಡೆಸಲು ಇಬ್ಬರು ಬಂದೂಕುಧಾರಿಗಳಾದ ಪಾಲ್ ಹಾಗೂ ಗುಪ್ತಾನನ್ನು ಕುಖ್ಯಾತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ನಿಯೋಜಿಸಿದ್ದ ಎಂಬುದು ಪ್ರಾಥಮಿಕ ತನಿಖೆಯ ವೇಳೆ ತಿಳಿದು ಬಂದಿದೆ ಎಂದು ಅವರು ಹೇಳಿದ್ದಾರೆ.

ಪಾಲ್ ಗುಂಡಿನ ದಾಳಿ ನಡೆಸುವಾಗ, ಗುಪ್ತಾ ಗ್ಯಾಂಗ್ ಸ್ಟರ್ ಗುಂಪಿನ ಸದಸ್ಯರೊಂದಿಗೆ ಸಂಪರ್ಕದಲ್ಲಿದ್ದ ಎಂದು ಬಗಾದಿಯಾ ತಿಳಿಸಿದ್ದಾರೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

20 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago