ಮುಂಬೈ: ಭಾರೀ ಮಳೆಯಿಂದಾಗಿ ಲ್ಯಾಂಡಿಂಗ್ ವೇಳೆ ಏರ್ ಇಂಡಿಯಾ ವಿಮಾನವೊಂದು ರನ್ ವೇಯಲ್ಲೇ ಜಾರಿ ಅವಘಡ ಸಂಭವಿಸಿ ವಿಮಾನ ಎಂಜಿನ್ ಗೆ ಹಾನಿಯಾಗಿರುವ ಘಟನೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ನಡೆದಿದೆ. ಕೇರಳದ ಕೊಚ್ಚಿಯಿಂದ ಹೊರಟಿದ್ದ ವಿಮಾನ ಮುಂಬೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ಭಾರೀ ಮಳೆಯ ಪರಿಣಾಮ ರನ್ ವೇಯಿಂದ ಜಾರಿದೆ. ಈ ಅವಘಡದಿಂದ ವಿಮಾನದ ಎಂಜಿನ್ ಗೆ ಹಾನಿಯಾಗಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರಿಗಾಗಲೀ, ಸಿಬ್ಬಂದಿಗಳಿಗಾಗಲೀ ಯಾವುದೇ ಹಾನಿಯಾಗಿಲ್ಲ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಕ್ತಾರರು, ಭಾರೀ ಮಳೆಯಿಂದಾಗಿ ಸಂಭವಿಸಿದ ಈ ಅವಘಡದಲ್ಲಿ ಕೇವಲ ವಿಮಾನ ಹಾಗೂ ರನ್‌ವೇಗೆ ಹಾನಿಯಾಗಿದೆಯೇ ಹೊರತು, ಪ್ರಯಾಣಿಕರಿಗಾಗಲೀ, ಸಿಬ್ಬಂದಿಗಳಿಗಾಗಲೀ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಹೇಳಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…