Featured

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು

ಮುಂಬೈ: ಕಳೆದ ಮೂರು ದಿನಗಳಿಂದ ಮುಂಬೈ ಸೇರಿದಂತೆ ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಭಾರೀ ಮಳೆ  ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಸ್ತೆಗಳು ಜಲಾವೃತವಾಗಿದ್ದು, ವಾಹನ ಸಂಚಾರ, ರೈಲು ಸೇವೆ ಮತ್ತು ದೈನಂದಿನ ಬದುಕಿನ ಮೇಲೆ ಮಳೆಯ ಪರಿಣಾಮ ತೀವ್ರವಾಗಿದೆ.

ಈ ದುರ್ಘಟನೆಗಳ ನಡುವೆ ಭಿವಂಡಿಯಲ್ಲಿ ಮನಕಲಕುವ ಘಟನೆ ನಡೆದಿದೆ. ತುಂಬಿ ಹರಿಯುತ್ತಿದ್ದ ಚರಂಡಿಯಲ್ಲಿ 13 ವರ್ಷದ ಬಾಲಕ ಮುಹಮ್ಮದ್ ಅಬೂಝರ್ ಕೊಚ್ಚಿಹೋಗಿದ್ದಾನೆ. ಸ್ಥಳೀಯರು ರಕ್ಷಿಸಲು ಪ್ರಯತ್ನಿಸಿದರೂ ನೀರಿನ ರಭಸಕ್ಕೆ ಸಿಲುಕಿ ಬಾಲಕ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ:

ಕಳೆದ ಆರು ದಿನಗಳಲ್ಲಿ ಮುಂಬೈ ನಗರದಲ್ಲಿ ಮಳೆಯ ಅವಾಂತರಕ್ಕೆ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಭಾರಿ ಮಳೆಯ ಕಾರಣ ಹಲವೆಡೆ ಭೂಕುಸಿತ, ನೀರು ನಿಲ್ಲುವುದು ಮತ್ತು ಅಪಘಾತಗಳು ಹೆಚ್ಚಾಗಿವೆ.

ಮಳೆಯ ಹೊಡೆತಕ್ಕೆ ರೈಲು ಸಂಚಾರ ತೀವ್ರವಾಗಿ ಹದಗೆಟ್ಟಿದೆ. ಇಂದು ಕೂಡ ಸೆಂಟ್ರಲ್ ಮತ್ತು ವೆಸ್ಟರ್ನ್ ರೈಲ್ವೆ ವ್ಯಾಪ್ತಿಯಲ್ಲಿ 200ಕ್ಕೂ ಹೆಚ್ಚು ರೈಲು ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಕೂಡ 43 ರೈಲುಗಳ ಸಂಚಾರವನ್ನ ರದ್ದುಗೊಳಿಸಲಾಗಿದೆ. ಇದರಲ್ಲಿ ಸೆಂಟ್ರಲ್ ರೈಲ್ವೆಯ 27 ಮತ್ತು ವೆಸ್ಟರ್ನ್ ರೈಲ್ವೆಯ 16 ರೈಲುಗಳು ಸೇರಿವೆ.

ಇದನ್ನೂ ಓದಿ: 

ಲೋನಾವಾಲಾ-ಕರ್ಜತ್ ಘಾಟ್ ವಿಭಾಗದಲ್ಲಿ ಭೂಕುಸಿತ ಸಂಭವಿಸಿರುವುದರಿಂದ ರೈಲು ಸಂಚಾರಕ್ಕೆ ಮತ್ತಷ್ಟು ತೊಂದರೆಯಾಗಿದೆ. ಪಾಲ್ಘರ್ ಜಿಲ್ಲೆಯಲ್ಲಿ 300 ಮಿಲಿ ಮೀಟರ್‌ಗೂ ಹೆಚ್ಚು ಮಳೆಯಾಗಿದ್ದು, ನಲಸೋಪಾರಾ ಭಾಗದಲ್ಲಿ ಭಾರಿ ಜಲಾವೃತ ಉಂಟಾಗಿದೆ. ಇದರ ಪರಿಣಾಮವಾಗಿ ವಸಾಯಿ ಮತ್ತು ವಿರಾರ್ ನಡುವಿನ ಉಪನಗರ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

Vishwa News 24

Recent Posts

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

4 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

6 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

7 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

7 hours ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

7 hours ago

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ – vishwanews24

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ…

7 hours ago