ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ – vishwanews24
ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ
ಮುಂಬೈ: ಘಾಟ್ಕೋಪರ್‌ನ ಚಿರಾಗ್ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ ಬೆಳಗಿನ ಜಾವ ಭೂಕುಸಿತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಅವಶೇಷಗಳಡಿ ಇನ್ನೂ ನಾಲ್ಕರಿಂದ ಐದು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಬುಧವಾರ ಬೆಳಗಿನ ಜಾವ 3:48ರ ಸುಮಾರಿಗೆ ಗುಡ್ಡದ ಇಳಿಜಾರಿನ ಒಂದು ಭಾಗ ಕುಸಿದು, ಅದರ ಅವಶೇಷಗಳು ಎರಡು-ಮೂರು ಮನೆಗಳ ಮೇಲೆ ಬಿದ್ದಿವೆ. ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಇದನ್ನೂ ಓದಿ:
ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24
ಮಾಹಿತಿ ತಿಳಿಯುತ್ತಿದ್ದಂತೆ ಮುಂಬೈ ಅಗ್ನಿಶಾಮಕ ದಳ, ಪೊಲೀಸರು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(NDRF) ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ಅವಶೇಷಗಳಡಿ ಸಿಲುಕಿರುವವರಿಗಾಗಿ ಶೋಧ ಮುಂದುವರಿದಿದೆ.
ಘಟನೆಯಲ್ಲಿ ಇಬ್ಬರು ಮೃತಪಟ್ಟಿರುವುದನ್ನು ಪೊಲೀಸರು ದೃಢಪಡಿಸಿದ್ದಾರೆ. ಇನ್ನೂ ಮೂರರಿಂದ ನಾಲ್ಕು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಡಿಸಿಪಿ ಗಣೇಶ್ ಶಿಂಧೆ ತಿಳಿಸಿದ್ದಾರೆ.
ಇದನ್ನೂ ಓದಿ:
ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24
ಇನ್ನು ಘಟನೆಯಲ್ಲಿ ಗಾಯಗೊಂಡಿರುವ 18 ವರ್ಷದ ಸೋಹೆಲ್ ಅನ್ಸಾರಿ ಮತ್ತು 14 ವರ್ಷದ ಮೊಹಮ್ಮದ್ ಅನ್ಸಾರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಹೆಲ್‌ಗೆ ತಲೆಗೆ ಗಾಯವಾಗಿದ್ದು, ಮೊಹಮ್ಮದ್‌ಗೆ ಬೆನ್ನಿಗೆ ಗಾಯವಾಗಿದೆ. ಇಬ್ಬರ ಸ್ಥಿತಿಯೂ ಸದ್ಯ ಸ್ಥಿರವಾಗಿದೆ
