Featured

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ – vishwanews24

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ಮುಂಬೈ: ಘಾಟ್ಕೋಪರ್‌ನ ಚಿರಾಗ್ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ ಬೆಳಗಿನ ಜಾವ ಭೂಕುಸಿತ  ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಅವಶೇಷಗಳಡಿ ಇನ್ನೂ ನಾಲ್ಕರಿಂದ ಐದು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಬುಧವಾರ ಬೆಳಗಿನ ಜಾವ 3:48ರ ಸುಮಾರಿಗೆ ಗುಡ್ಡದ ಇಳಿಜಾರಿನ ಒಂದು ಭಾಗ ಕುಸಿದು, ಅದರ ಅವಶೇಷಗಳು ಎರಡು-ಮೂರು ಮನೆಗಳ ಮೇಲೆ ಬಿದ್ದಿವೆ. ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ: 

ಮಾಹಿತಿ ತಿಳಿಯುತ್ತಿದ್ದಂತೆ ಮುಂಬೈ ಅಗ್ನಿಶಾಮಕ ದಳ, ಪೊಲೀಸರು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(NDRF) ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ಅವಶೇಷಗಳಡಿ ಸಿಲುಕಿರುವವರಿಗಾಗಿ ಶೋಧ ಮುಂದುವರಿದಿದೆ.

ಘಟನೆಯಲ್ಲಿ ಇಬ್ಬರು ಮೃತಪಟ್ಟಿರುವುದನ್ನು ಪೊಲೀಸರು ದೃಢಪಡಿಸಿದ್ದಾರೆ. ಇನ್ನೂ ಮೂರರಿಂದ ನಾಲ್ಕು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಡಿಸಿಪಿ ಗಣೇಶ್ ಶಿಂಧೆ ತಿಳಿಸಿದ್ದಾರೆ.

ಇದನ್ನೂ ಓದಿ: 

ಇನ್ನು ಘಟನೆಯಲ್ಲಿ ಗಾಯಗೊಂಡಿರುವ 18 ವರ್ಷದ ಸೋಹೆಲ್ ಅನ್ಸಾರಿ ಮತ್ತು 14 ವರ್ಷದ ಮೊಹಮ್ಮದ್ ಅನ್ಸಾರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಹೆಲ್‌ಗೆ ತಲೆಗೆ ಗಾಯವಾಗಿದ್ದು, ಮೊಹಮ್ಮದ್‌ಗೆ ಬೆನ್ನಿಗೆ ಗಾಯವಾಗಿದೆ. ಇಬ್ಬರ ಸ್ಥಿತಿಯೂ ಸದ್ಯ ಸ್ಥಿರವಾಗಿದೆ

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

18 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

20 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

20 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

20 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

21 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

21 hours ago