ನವದೆಹಲಿ: ಕೆಲ ವಾರಗಳಿಂದ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ಮುಖಂಡ ಸಂಜಯ್ ರೌತ್ ಅವರೊಂದಿಗೆ ನಡೆಯುತ್ತಿರುವ ಜಟಾಪಟಿ ಹಿನ್ನೆಲೆಯಲ್ಲಿ, ನಟಿ ಕಂಗನಾ ರಣಾವತ್ ಅವರಿಗೆ ವೈ ಪ್ಲಸ್ ಭದ್ರತೆಯನ್ನು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.
ಕಂಗನಾ ಇತ್ತೀಚೆಗೆ ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಹೋಲಿಸಿದ್ದರು, ಇದರ ವಿರುದ್ಧ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ಮುಖಂಡರು ಕಿಡಿ ಕಾರಿದ್ದರು. ಸಂಜಯ್ ರೌತ್ ತನ್ನ ಸ್ವಂತ ರಾಜ್ಯ ಹಿಮಾಚಲ ಪ್ರದೇಶದಿಂದ ಮುಂಬೈಗೆ ಮರಳದಂತೆ ಎಚ್ಚರಿಕೆ ನೀಡಿದ ನಂತರ ಆಕೆ ಮತ್ತು ಕುಟುಂಬ ಭದ್ರತೆ ಒದಗಿಸುವಂತೆ ಕೇಳಿಕೊಂಡಿದ್ದರು.
ಇದೇ 9ರಂದು ಅವರು ಮುಂಬೈಗೆ ತೆರಳಲಿರುವ ಹಿನ್ನೆಲೆಯಲ್ಲಿ ಕಂಗನಾ ಅವರು ಸುರಕ್ಷತೆಯ ದೃಷ್ಟಿಯಿಂದ ಭದ್ರತೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಭದ್ರತೆ ಅಡಿ ಕಂಗನಾ ಅವರಿಗೆ ಒಬ್ಬರು ಅಥವಾ ಇಬ್ಬರು 2 ಕಮಾಂಡೋಗಳು ಭದ್ರತೆ ವಹಿಸಲಿದ್ದಾರೆ, ಜತೆಗೆ ಪೊಲೀಸ್ ಸಿಬ್ಬಂದಿ ಸೇರಿದಂತೆ 11 ಸಿಬ್ಬಂದಿಗಳ ಭದ್ರತಾ ವ್ಯವಸ್ಥೆಯನ್ನು ಇದು ಹೊಂದಿರುತ್ತದೆ.
ಹಿಮಾಚಲ ಪ್ರದೇಶ ಸರ್ಕಾರವು ರಾಜ್ಯದಲ್ಲಿ ಕಂಗನಾ ಅವರಿಗೆ ಭದ್ರತೆ ಒದಗಿಸಲು ನಿರ್ಧರಿಸಿತ್ತು. ಇದರ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ಈ ನಿರ್ಧಾರ ಮಾಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…