ಪಣಜಿ: ಮುಂಬೈ-ಮಂಗಳೂರು ಕೊಂಕಣ ರೈಲ್ವೆ ಮಾರ್ಗವನ್ನು 11,000 ಕೋಟಿ ರೂ ವೆಚ್ಚದಲ್ಲಿ ವಿದ್ಯುದೀಕರಣಗೊಳಿಸಲಾಗುವುದು ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗೋವಾ ಮಾರ್ಗವಾಗಿ ಮುಂಬೈ-ಮಂಗಳೂರು ಕೊಂಕಣ ರೈಲ್ವೆ ಮಾರ್ಗವನ್ನು ಅಂದಾಜು 11,000 ಕೋಟಿ ರೂ. ವೆಚ್ಚದಲ್ಲಿ ವಿದ್ಯುದೀಕರಣಗೊಳಿಸಲಾಗುವುದು. ವಿಶ್ವದಲ್ಲೇ ಅತ್ಯುತ್ತಮ ಸೇವೆ ಮತ್ತು ದರ್ಜೆಯನ್ನಾಗಿಸಲು ರೈಲ್ವೆ ವಲಯದಲ್ಲಿ 2030ರ ವೇಳೆಗೆ 50 ಲಕ್ಷ ಕೋಟಿ ರೂ. ಹೂಡಿಕೆ ಮಾಡಲು ಸರ್ಕಾರ ಉದ್ದೇಶಿಸಿದೆ ಎಂದು ತಿಳಿಸಿದರು.
ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಕೋಟಿ ರೂ. ಮೊತ್ತದ ಯೋಜನೆಗಳನ್ನು ಕೈಗೊಳ್ಳಲು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಪ್ರವಾಸೋದ್ಯಮ ತಾಣವಾದ ಗೋವಾದಲ್ಲಿ ರೈಲು ಸಂಪರ್ಕ ವೃದ್ದಿಸಲು ಒತ್ತು ನೀಡಲಾಗಿದೆ. ಸಾಂಪ್ರದಾಯಿಕ ಹಳೆ ಬೋಗಿಗಳನ್ನು ಅತ್ಯಾಧುನಿಕ ಬೋಗಿಗಳೊಂದಿಗೆ ಬದಲಾಯಿಸುವ ಕಾರ್ಯ ವೇಗದಿಂದ ಸಾಗಿದೆ ಎಂದು ಹೇಳಿದರು.
ಮೇಕ್ ಇನ್ ಇಂಡಿಯಾ ಕಾರ್ಯಕ್ರಮದಡಿ ದೇಶೀಯವಾಗಿಯೇ ವಿಶ್ವದರ್ಜೆಯ ಬೋಗಿಗಳ ಉತ್ಪಾದನೆಯಾಗುತ್ತಿದೆ ಎಂದು ಪಿಯೂಷ್ ಗೋಯಲ್ ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…