ಮುಂಬೈ: ಮದುವೆಯಾಗಲು ನಿರಾಕರಿಸಿದ್ದಕ್ಕೆ ಪಿಎಚ್‍ಡಿ ವಿದ್ಯಾರ್ಥಿಯೊಬ್ಬ ತನಗೆ ಬೆಂಕಿ ಹಚ್ಚಿಕೊಂಡು ಯುವತಿಯನ್ನು ತಬ್ಬಿ ಹತ್ಯೆಗೈಯ್ಯಲು ಯತ್ನಿಸಿರುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್‍ನಲ್ಲಿನಡೆದಿದೆ. ಇದೀಗ ಇಬ್ಬರಿಗೂ ಸುಟ್ಟ ಗಾಯವಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಇಬ್ಬರೂ ಪ್ರಾಣಿಶಾಸ್ತ್ರದ (Zoology) ಪಿಎಚ್‍ಡಿ ವಿದ್ಯಾರ್ಥಿಗಳಾಗಿದ್ದು, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿದ್ದರು. ಇದನ್ನೂ ಓದಿ: ಉಡುಪಿ: ಪಿಎಫ್‍ಐ ಬ್ಯಾನ್ ಮಾಡಿದಂತೆ ಭಯೋತ್ಪಾದಕರ ಬೇರು ಸಮೇತ ಕಿತ್ತು ಹಾಕುತ್ತೇವೆ : ತೇಜಸ್ವಿ ಸೂರ್ಯ – Vishwanews24
ಹನುಮಾನ್ ತೆಕಡಿಯಲ್ಲಿರುವ ಸರ್ಕಾರಿ ಫೋರೆನ್ಸಿಕ್ ಕಾಲೇಜಿನ ಬಯೋಫಿಸಿಕ್ಸ್ ವಿಭಾಗದ ಕ್ಯಾಬಿನ್‍ನಲ್ಲಿ ಯುವತಿ ತನ್ನ ಪ್ರಾಜೆಕ್ಟ್ ಮಾಡುತ್ತಿದ್ದಾಗ ಆರೋಪಿ ಒಳಗೆ ನುಗ್ಗಿದ್ದಾನೆ. ನಂತರ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ್ದೇಕೆ ಎಂದು ಪ್ರಶ್ನಿಸಲು ಆರಂಭಿಸಿದ್ದಾನೆ. ನಂತರ ತನ್ನ ಮೇಲೆ ಹಾಗೂ ಯುವತಿಯ ಮೇಲೆ ಪೆಟ್ರೋಲ್ ಸುರಿದು ಲೈಟರ್‍ನಿಂದ ಬೆಂಕಿ ಹಚ್ಚಿಕೊಂಡಿದ್ದಾನೆ. ನಂತರ ಯುವತಿಯನ್ನು ಗಟ್ಟಿಯಾಗಿ ತಬ್ಬಿಕೊಂಡಿದ್ದಾನೆ ಎಂದು ಬೇಗಂಪುರ ಠಾಣೆಯ ಪಿಐ ಪ್ರಶಾಂತ್ ಪೋತದಾರ ತಿಳಿಸಿದ್ದಾರೆ.
ಇದೀಗ ಇಬ್ಬರನ್ನು ಚಿಕಿತ್ಸೆಗಾಗಿ ಔರಂಗಾಬಾದ್‍ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವ್ಯಕ್ತಿಗೆ 90% ಸುಟ್ಟ ಗಾಯಗಳಾಗಿದ್ದರೆ, ಯುವತಿಗೆ 55% ಸುಟ್ಟ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಮಹಿಳೆಯ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಆರೋಪಿ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 307, 326A, 354D, 506,34 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಮಣಿಪಾಲ: ಕರಾವಳಿಯಲ್ಲಿ ಎನ್ಐಎ ಘಟಕ ಆರಂಭಕ್ಕೆ ಸಂಸತ್ ನಲ್ಲಿ ವಿಷಯ ಪ್ರಸ್ತಾಪ: ತೇಜಸ್ವಿ ಸೂರ್ಯ – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…