ಮುಂಬೈ: ಮಹಾರಾಷ್ಟ್ರದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಹಲವೆಡೆ ಬಸ್, ರೈಲು ಸಂಚಾರ ಸ್ಥಗಿತಗೊಳಿಸಲಾಗಿದ್ದು, ಸಾರ್ವಜನಿಕರು ಪರದಾಡುತ್ತಿದ್ದಾರೆ.
ರೈಲು ಹಳಿಗಳು ನೀರಿನಿಂದ ಜಲಾವೃತಗೊಂಡಿರುವ ಕಾರಣಕ್ಕೆ ದಾದರ್ ಮತ್ತು ಕುರ್ಲಾ ನಿಲ್ದಾಣದ ನಡುವಿನ ಉಪನಗರ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೇಂದ್ರ ರೈಲ್ವೆ ವಕ್ತಾರರು ತಿಳಿಸಿದ್ದಾರೆ.
‘ಮುಂಬೈ, ಥಾಣೆ, ಪಾಲ್ಘರ್, ರಾಯಗಡ್ ಮತ್ತು ರತ್ನಾಗಿರಿ ಜಿಲ್ಲೆಗಳಲ್ಲಿ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಬಾರಿ ಮಳೆಯಾಗಲಿದ್ದು, ಈಗಾಗಲೇ ಆರೇಂಜ್ ಆಲರ್ಟ್ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಲವಡೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇಂದು ಮುಂಬೈನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮೂರು ಗಂಟೆಗೂ ಹೆಚ್ಚು ಕಾಲ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…