ಮುಂಬೈ: ಯುವತಿಯೊಬ್ಬಳು ರೀಲ್ಸ್ ಮಾಡುವಾಗ 300 ಅಡಿ ಆಳದ ಕಂದಕಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಘಟನೆಯು ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಹನುಮಾನ್ನಗರದಲ್ಲಿ ನಡೆದಿದ್ದು, ಮೃತರನ್ನು ಶ್ವೇತಾ ದೀಪಕ್ ಸುರ್ವಾಸೆ (23) ಎಂದು ಗುರುತಿಸಲಾಗಿದೆ. ಇವರು ರೀಲ್ಸ್ ಮಾಡುವಾಗ ಕಾರನ್ನು ರಿವರ್ಸ್ ತೆಗೆಯುವಾಗ ಈ ದುರ್ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ವೈರಲ್ ಆಗಿರುವ ವಿಡಿಯೋ ನೋಡುವುದಾದರೆ, ರೀಲ್ಸ್ ಮಾಡುವಾದ ಯುವತಿ ಕಾರನ್ನು ರಿವರ್ಸ್ ತೆಗೆಯುತ್ತ ರೀಲ್ಸ್ ಮಾಡಲು ಶುರು ಮಾಡುತ್ತಾರೆ. ಈ ವೇಳೆ ಆಕೆಯ ಗೆಳೆಯ ಕಾರನ್ನು ನಿಧಾನವಾಗಿ ರಿವರ್ಸ್ ತೆಗೆಯುವಂತೆ ಸೂಚಿಸುತ್ತಾನೆ. ಇದಕ್ಕೆ ಕೇರ್ ಮಾಡದ ಆಕೆ ವೇಗವಾಗಿ ರಿವರ್ಸ್ ತೆಗೆಯುತ್ತಾಳೆ. ಈ ವೇಳೆ ನಿಯಂತ್ರಣ ತಪ್ಪಿ ಕಾರು 300 ಅಡಿ ಆಳದ ಕಂದಕಕ್ಕೆ ಉರುಳುತ್ತದೆ.
ಕಾರಿ ಕಂದಕಕ್ಕೆ ಉರುಳಿದ ರಭಸಕ್ಕೆ ಜಖಂಗೊಂಡಿದ್ದು, ಕಾರಿನೊಳಗಡೆ ಯುವತಿ ಕಾರು ಬಿದ್ದ ರಭಸಕ್ಕೆ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ. ವಿಚಾರ ತಿಳಿದು ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡದ ಸದಸ್ಯರು ಕಂದಕಕ್ಕೆ ಉರುಳಿದ್ದ ಕಾರು ಹಾಗೂ ಮೃತದೇಹವನ್ನು ಹೊರತೆಗೆದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…