ಮುಂಬೈ : ಮುಂಬೈಯಲ್ಲಿನ ವಸತಿ ಕಟ್ಟಡವೊಂದರ ಲಿಫ್ಟ್ ಒಳಗೆ ಹೈಡ್ರೋಜನ್ ತುಂಬಿದ ಬಲೂನ್‌ಗಳು ಸ್ಫೋಟಗೊಂಡಿರುವ ಭಯಾನಕ ಘಟನೆ ಸಿಸಿ ಕ್ಯಾಮರಾ ದೃಶ್ಯದಲ್ಲಿ ದಾಖಲಾಗಿದ್ದು, ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವಿಡಿಯೋದಲ್ಲಿ, ಬಲೂನ್‌ಗಳಿಂದ ತುಂಬಿದ ಪ್ಲಾಸ್ಟಿಕ್ ಚೀಲವನ್ನು ಹೊತ್ತುಕೊಂಡು ಒಬ್ಬ ವ್ಯಕ್ತಿ ಲಿಫ್ಟ್ ಒಳಗೆ ಪ್ರವೇಶಿಸುತ್ತಿರುವುದು ಕಾಣುತ್ತದೆ. ಅವರೊಂದಿಗೆ ಮತ್ತೊಬ್ಬ ವ್ಯಕ್ತಿ ಟ್ರಾಲಿ ಬ್ಯಾಗ್ ಹಿಡಿದು ಲಿಫ್ಟ್‌ಗೆ ಬರುತ್ತಾರೆ. ಲಿಫ್ಟ್ ಬಾಗಿಲು ಮುಚ್ಚಿದ ತಕ್ಷಣವೇ ಹೈಡ್ರೋಜನ್ ತುಂಬಿದ ಬಲೂನ್‌ಗಳು ಏಕಾಏಕಿ ಸ್ಫೋಟಗೊಂಡಿವೆ.
ಇದನ್ನೂ ಓದಿ👇
ಸ್ಫೋಟದ ಪರಿಣಾಮ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಲಿಫ್ಟ್ ಒಳಗೆ ಹರಡಿದ್ದು, ಕೆಲಕಾಲ ಭಯಾನಕ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಲಿಫ್ಟ್‌ನಲ್ಲಿದ್ದ ಎಲ್ಲರೂ ಸಮಯಕ್ಕೆ ಸರಿಯಾಗಿ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹೆಚ್ಚಿನ ಅಪಾಯ ಸಂಭವಿಸಿಲ್ಲ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…