ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಬಳಿಕ ಶಿವಸೇನೆ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿಕಟವರ್ತಿ ಎಂದು ಪರಿಗಣಿಸಲ್ಪಟ್ಟಿರುವ ಏಕನಾಥ್ ಶಿಂಧೆ ಅವರು ಕೆಲ ಶಾಸಕರೊಂದಿಗೆ ನಾಪತ್ತೆಯಾಗಿರುವುದು ಮಹಾರಾಷ್ಟ್ರ ಸರ್ಕಾರ ಚಿಂತೆಗೊಳಗಾಗುವಂತೆ ಮಾಡಿದ್ದು, ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಈ ಬೆಳವಣಿಗೆಯಲ್ಲಿ ನಮ್ಮ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದೆ.
ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರು ಮಾತನಾಡಿ, ಶಿವಸೇನೆ ನಾಯಕರು ನಾಪತ್ತೆಯಾಗಿರುವುದರಲ್ಲಿ ನಮ್ಮ ಪಾತ್ರವಿಲ್ಲ ಆದರೆ, ಏಕನಾಥ್ ಶಿಂಧೆಯವರು ನಮ್ಮನ್ನು ಸಂಪರ್ಕಿಸಿ ಸರ್ಕಾರ ರಚಿಸುವ ಆಫರ್ ನೀಡಿದ್ದೇ ಆದರೆ, ಅದಕ್ಕೆ ನಮ್ಮ ಒಪ್ಪಿಗೆ ಇದೆ ಎಂದು ಹೇಳಿದ್ದಾರೆ.
ಶಾಸಕರು ನಾಪತ್ತೆಯಾಗಿರುವುದು ಶಿವಸೇನೆಯ ಆಂತರಿಕ ವಿಚಾರ. ಪಕ್ಷದ ನಾಯಕರೊಂದಿಗೆ ಶಿಂಧೆ ಸೂರತ್’ಗೆ ಹೋಗಿರುವ ಕುರಿತು ನಮಗೆ ಮಾಹಿತಿ ಇಲ್ಲ. ಇದರಲ್ಲಿ ನಮ್ಮ ಪಾತ್ರವಿಲ್ಲ. ಆದರೆ, ಶಿಂಧೆಯವರಿಂದ ಸರ್ಕಾರ ರಚಿರುವ ಆಫರ್ ಬಂದರೆ, ಅದನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಈ ಹಿಂದೆ ಕೂಡ ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡಿದ್ದೇವೆ. ಸರ್ಕಾರ ರಚನೆಯಾದರೆ, ಮುಂದೆಯೂ ಉತ್ತಮವಾಗಿ ಕೆಲಸ ಮಾಡುತ್ತೇವೆ. ಅವರೊಂದಿಗೆ ಸರ್ಕಾರ ರಚಿಸಲು ಸಿದ್ಧರಿದ್ದೇವೆ. ರಾವತ್ ರಾಜ್ಯಕ್ಕೆ ಸಾಕಷ್ಟು ಹಾನಿಯುಂಟು ಮಾಡಿದ್ದಾರೆ. ವ್ಯಕ್ತಿಯೊಬ್ಬರ ಪರವಾಗಿ ಈ ರೀತಿ ಮಾಡುತ್ತಿದ್ದಾರೆಂದು ತಿಳಿಸಿದ್ದಾರೆ.
ಕೇಂದ್ರ ಸಚಿವ, ರಾಜ್ಯಸಭಾ ಸದಸ್ಯ ನಾರಾಯಣ್ ರಾಣೆಯವರು ಮಾತನಾಡಿ, ಏಕನಾಥ್ ಶಿಂಧೆಯವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…