ಮುಂಬೈ: ಸಾಯಿಬಾಬಾ ದರ್ಶನಕ್ಕೆ ತರಳುತ್ತಿದ್ದ ಬಸ್ ಭೀಕರ ಅಪಘಾತ – 10 ಮಂದಿ ಸಾವು, 34 ಮಂದಿಗೆ ಗಾಯ – Vishwanews24
ಮುಂಬೈ: ಸಾಯಿಬಾಬಾ ದರ್ಶನಕ್ಕೆ ತರಳುತ್ತಿದ್ದ ಬಸ್ ಭೀಕರ ಅಪಘಾತ – 10 ಮಂದಿ ಸಾವು, 34 ಮಂದಿಗೆ ಗಾಯ
ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ
ಮುಂಬೈ: ಶಿರಡಿ ಸಾಯಿ ಬಾಬಾ ದರ್ಶನಕ್ಕೆ ತರಳುತ್ತಿದ್ದ ಬಸ್‌ವೊಂದು ಬೆಳ್ಳಂಬೆಳಗ್ಗೆ ಭೀಕರ ಅಪಘಾತಕ್ಕೀಡಾಗಿದ್ದು 10 ಮಂದಿ ಸಾವನ್ನಪ್ಪಿದ್ದು 34 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಸಿನ್ನಾರ್ ಬಳಿಯ ನಾಸಿಕ್-ಶಿರಡಿ ಹೆದ್ದಾರಿಯ ಪತ್ತಾರೆ ಗ್ರಾಮದ ಬಳಿ ಘಟನೆ ನಡೆದಿದೆ. ಮಹಾರಾಷ್ಟ್ರದಲ್ಲಿ ಶಿರಡಿ ಸಾಯಿಬಾಬಾ ದೇವರ ದರ್ಶನಕ್ಕಾಗಿ ತೆರಳುತ್ತಿದ್ದ ಬಸ್, ಟ್ರಕ್‌ವೊಂದಕ್ಕೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು, 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Maharashtra | 10 people died and several others injured after a bus carrying Sai Baba devotees collided with a truck near Pathare on Nashik-Shirdi Highway: Nashik Police pic.twitter.com/Xel2Irb0vc
— ANI (@ANI) January 13, 2023
ಉಲ್ಲಾಸ ನಗರದಿಂದ ಸಾಯಿಬಾಬಾ ದರ್ಶನಕ್ಕೆ ಹೊರಟಿದ್ದ 15 ಬಸ್‌ಗಳಲ್ಲಿ ಇದು ಸಹ ಒಂದಾಗಿತ್ತು. ಮೃತ 10 ಮಂದಿಯಲ್ಲಿ ಐವರು ಮಹಿಳೆಯರು, ಮೂವರು ಪುರುಷರು ಹಾಗೂ ಇಬ್ಬರು ಮಕ್ಕಳಿದ್ದಾರೆ. ಇನ್ನೂ ಗಾಯಗೊಂಡಿರುವ 34 ಮಂದಿ ನಾಸಿಕ್‌ನ ಜಿಲ್ಲಾ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಹೆದ್ದಾರಿಯನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ನಾಸಿಕ್-ಶಿರಡಿ ಹೆದ್ದಾರಿಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಆದೇಶಿಸಿದ್ದಾರೆ.
Join our Whatsapp group by clicking the below link 👇👇
