Featured

ಮುಂಬೈ: ಸಾಯಿಬಾಬಾ ದರ್ಶನಕ್ಕೆ ತರಳುತ್ತಿದ್ದ ಬಸ್ ಭೀಕರ ಅಪಘಾತ – 10 ಮಂದಿ ಸಾವು, 34 ಮಂದಿಗೆ ಗಾಯ – Vishwanews24

ಮುಂಬೈ: ಸಾಯಿಬಾಬಾ ದರ್ಶನಕ್ಕೆ ತರಳುತ್ತಿದ್ದ ಬಸ್ ಭೀಕರ ಅಪಘಾತ – 10 ಮಂದಿ ಸಾವು, 34 ಮಂದಿಗೆ ಗಾಯ

ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ

ಮುಂಬೈ: ಶಿರಡಿ ಸಾಯಿ ಬಾಬಾ ದರ್ಶನಕ್ಕೆ ತರಳುತ್ತಿದ್ದ ಬಸ್‌ವೊಂದು ಬೆಳ್ಳಂಬೆಳಗ್ಗೆ ಭೀಕರ ಅಪಘಾತಕ್ಕೀಡಾಗಿದ್ದು 10 ಮಂದಿ ಸಾವನ್ನಪ್ಪಿದ್ದು 34 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಸಿನ್ನಾರ್ ಬಳಿಯ ನಾಸಿಕ್-ಶಿರಡಿ ಹೆದ್ದಾರಿಯ  ಪತ್ತಾರೆ ಗ್ರಾಮದ ಬಳಿ ಘಟನೆ ನಡೆದಿದೆ. ಮಹಾರಾಷ್ಟ್ರದಲ್ಲಿ ಶಿರಡಿ ಸಾಯಿಬಾಬಾ ದೇವರ ದರ್ಶನಕ್ಕಾಗಿ ತೆರಳುತ್ತಿದ್ದ ಬಸ್, ಟ್ರಕ್‌ವೊಂದಕ್ಕೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು, 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಲ್ಲಾಸ ನಗರದಿಂದ ಸಾಯಿಬಾಬಾ ದರ್ಶನಕ್ಕೆ ಹೊರಟಿದ್ದ 15 ಬಸ್‌ಗಳಲ್ಲಿ ಇದು ಸಹ ಒಂದಾಗಿತ್ತು. ಮೃತ 10 ಮಂದಿಯಲ್ಲಿ ಐವರು ಮಹಿಳೆಯರು, ಮೂವರು ಪುರುಷರು ಹಾಗೂ ಇಬ್ಬರು ಮಕ್ಕಳಿದ್ದಾರೆ. ಇನ್ನೂ ಗಾಯಗೊಂಡಿರುವ 34 ಮಂದಿ ನಾಸಿಕ್‌ನ ಜಿಲ್ಲಾ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಹೆದ್ದಾರಿಯನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ನಾಸಿಕ್-ಶಿರಡಿ ಹೆದ್ದಾರಿಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಆದೇಶಿಸಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

1 hour ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

3 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

4 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

4 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

4 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

5 hours ago